ಬೆಂಗಳೂರು: 7ನೇ ವೇತನ ಆಯೋಗದಲ್ಲಿ ಒಪಿಎಸ್ ಅನುಷ್ಠಾನಗೊಳಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಸರ್ಕಾರಿ ನೌಕರರು 7 ದಿನಗಳ ಗಡುವು ನೀಡಿದ್ದಾರೆ.
ಫೆಬ್ರವರಿ 22 ರಿಂದ ಫೆಬ್ರವರಿ 28 ರ ವರೆಗೆ ರಾಜ್ಯ ಸರ್ಕಾರಿ ನೌಕರರು ಗಡುವು ನೀಡಿದ್ದು, ಗಡುವಿಗೆ ಸರ್ಕಾರ ಸ್ಪಂದಿಸದಿದ್ದರೆ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು. ಮಾರ್ಚ್ 1 ರಿಂದಲೇ ಕರ್ತವ್ಯಕ್ಕೆ ಗೈರುಹಾಜರಾಗಲು ಸರ್ಕಾರಿ ನೌಕರರು ನಿರ್ಧರಿಸಿದ್ದಾರೆ. ನೌಕರರ ಸಂಘದ ತುರ್ತು ಕಾರ್ಯಕಾರಿಣಿ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎ.ಸ್ ಷಡಕ್ಷರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿಗಳು, ಮುಖ್ಯ ಕಾರ್ಯದರ್ಶಿಗಳಿಗೆ ತಿಳಿವಳಿಕೆ ಮತ್ತು ಮನವಿ ಪತ್ರ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಅಲ್ಲದೇ, ಮಾರ್ಚ್ 1 ರಿಂದ ಬೆಂಗಳೂರಿನಲ್ಲಿ ಕಸ ಎತ್ತದಿರಲು ನಿರ್ಧರಿಸಲಾಗಿದೆ ಎಂದು ಬಿಬಿಎಂಪಿ ನೌಕರರ ಸಂಘದ ಅಧ್ಯಕ್ಷ ಅಮೃತರಾಜ್ ಮಾಹಿತಿ ನೀಡಿದ್ದಾರೆ. ಹಳೆ ಪಿಂಚಣಿ ನೀತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ತೀವ್ರಗೊಳಿಸಲು ತೀರ್ಮಾನಿಸಲಾಗಿದೆ.