alex Certify ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ: NPS ನಿಂದ ಹಳೆ ಪಿಂಚಣಿ ಯೋಜನೆಗೆ ಸೇರಲು ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ: NPS ನಿಂದ ಹಳೆ ಪಿಂಚಣಿ ಯೋಜನೆಗೆ ಸೇರಲು ಅವಕಾಶ

ಬೆಂಗಳೂರು: ಹೊಸ ಪಿಂಚಣಿ ಯೋಜನೆಯಿಂದ ಹಳೆ ಪಿಂಚಣಿ ಯೋಜನೆಗೆ ಸೇರಲು ಒಪ್ಪಿಗೆ ನೀಡಲಾಗಿದೆ. 2006 ಏಪ್ರಿಲ್ ಗೆ ಮುನ್ನ ಅಧಿಸೂಚನೆ ಹೊರಡಿಸಿ ನೇಮಕವಾದ ಸರ್ಕಾರಿ ನೌಕರರನ್ನು ಒಪಿಎಸ್ ವ್ಯಾಪ್ತಿಗೆ ಒಳಪಡಿಸಲು ಆದೇಶ ಹೊರಡಿಸಲಾಗಿದೆ.

ಎನ್‌ಪಿಎಸ್ ನಿಂದ ಒಪಿಎಸ್ ವ್ಯಾಪ್ತಿಗೆ ಒಳಪಡಿಸುವ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ. ಹಳೆ ಪಿಂಚಣಿ ಯೋಜನೆಗೆ ಒಳಪಡಲು ರಾಜ್ಯ ಸರ್ಕಾರ ಆರು ಷರತ್ತುಗಳನ್ನು ವಿಧಿಸಿದೆ.

ಒಪಿಎಸ್‌ ಗೆ ಒಳಪಡಲು ಸರ್ಕಾರಿ ನೌಕರರು ತಾವೇ ಒಪ್ಪಿಗೆ ಸೂಚಿಸಬೇಕು. ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಟ್ಟರೆ ಬದಲಾವಣೆಗೆ ಅವಕಾಶ ಇಲ್ಲ. ಹೊಸ ಪಿಂಚಣಿ ಯೋಜನೆಯಿಂದ ಹಳೆ ಪಿಂಚಣಿ ಯೋಜನೆಗೆ ನೌಕರರು ಒಪ್ಪಿಗೆ ಸೂಚಿಸಬೇಕು.

ನೌಕರರು ನಿಗದಿತ ದಿನಾಂಕದೊಳಗೆ ತಮ್ಮ ಆಯ್ಕೆಯನ್ನು ಚಲಾಯಿಸದೆ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರೆಯುತ್ತಾರೆ. 2006ರ ಏಪ್ರಿಲ್ 1ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿಂದಿನ ಡಿಫೆನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಬಯಸಿದ್ದಲ್ಲಿ ತಮ್ಮ ಅಭಿಮತವನ್ನು ನಿಗದಿತ ನಮೂನೆಯಲ್ಲಿ 2024ರ ಜೂನ್ 30ರ ಒಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು. ಈ ಆಯ್ಕೆಯನ್ನು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶ ಇರುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...