ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿ ಫೆಬ್ರವರಿ 7ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘ ತಿಳಿಸಿದೆ.
ಎನ್.ಪಿ.ಎಸ್. ರದ್ದು ಮಾಡಿ ಒಪಿಎಸ್ ಜಾರಿಗೊಳಿಸಬೇಕು. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಎನ್‌ಪಿಎಸ್ ಯೋಜನೆಯ ರದ್ದು ಮಾಡುವುದಾಗಿ ಭರವಸೆ ನೀಡಿತ್ತು. ಆದರೆ ಇದುವರೆಗೂ ಈಡೇರಿಸಿಲ್ಲ. 2025- 26 ನೇ ಸಾಲಿನ ಬಜೆಟ್ ನಲ್ಲಿ ಎನ್‌ಪಿಎಸ್ ಯೋಜನೆ ರದ್ದುಪಡಿಸುತ್ತೇವೆ ಎಂದು ಪ್ರಕಟಿಸಬೇಕು. ಇಲ್ಲವಾದಲ್ಲಿ ಫೆಬ್ರವರಿ 7ರಂದು ಸ್ವಾತಂತ್ರ ಉದ್ಯಾನದಲ್ಲಿ ಧರಣಿ ನಡೆಸಲು ಭಾನುವಾರ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘ ರಾಜ್ಯ ಕಾರ್ಯಕಾರಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.