ಬೆಂಗಳೂರು: ಹಳೆ ಪಿಂಚಣಿ ಯೋಜನೆ, ವೇತನ ಹೆಚ್ಚಳಕ್ಕಾಗಿ ಬಜೆಟ್ ಎದುರು ನೋಡುತ್ತಿದ್ದ ಸರ್ಕಾರಿ ನೌಕರರಿಗೆ ನಿರಾಸೆಯಾಗಿದೆ. ಒಪಿಎಸ್ ಮತ್ತು 7ನೇ ವೇತನ ಆಯೋಗದ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪ ಮಾಡಿಲ್ಲ. ಇದರಿಂದಾಗಿ ನೌಕರರ ಆಸೆಗೆ ತಣ್ಣೀರು ಎರಚಿದಂತಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಆಯವ್ಯಯದಲ್ಲಿ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಮತ್ತು 7ನೇ ವೇತನ ಆಯೋಗ ಕುರಿತಾಗಿ ಪ್ರಸ್ತಾಪ ಮಾಡದಿರುವುದು ಸರ್ಕಾರಿ ನೌಕರರಿಗೆ ನಿರಾಸೆ ಮೂಡಿಸಿದೆ.
ಎನ್‌ಪಿಎಸ್ ಬದಲಿಗೆ ಒಪಿಎಸ್ ಮರು ಜಾರಿಗೆ ಒತ್ತಾಯಿಸಿ ನೌಕರರು ಹೋರಾಟ ನಡೆಸಿದ್ದರು. ಚುನಾವಣಾ ಪ್ರಣಾಳಿಕೆಯಲ್ಲಿಯೂ ಭರವಸೆ ನೀಡಲಾಗಿತ್ತು. ಸರ್ಕಾರಿ ನೌಕರರು ಒಪಿಎಸ್ ಮರು ಜಾರಿ ಮತ್ತು 7ನೇ ವೇತನ ಆಯೋಗದ ಬಗ್ಗೆ ಸಿಎಂ, ಡಿಸಿಎಂ ಭೇಟಿಯಾಗಿ ಮನವಿ ಮಾಡಿದ್ದರು, ಆದರೆ, ಬಜೆಟ್ ನಲ್ಲಿ ಈ ಕುರಿತಾಗಿ ಪ್ರಸ್ತಾಪ ಮಾಡದಿರುವುದು ಲಕ್ಷಾಂತರ ನೌಕರರಲ್ಲಿ ಬೇಸತ ತಂದಿದೆ.