ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಧಾರಾಕಾರ ಮಳೆ ಮುಂದುವರೆ ಹಿನ್ನಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಮಂಗಳೂರು, ಉಳ್ಳಾಲ, ಮುಲ್ಕಿ, ಬಂಟ್ವಾಳ, ಮೂಡಬಿದರೆ ತಾಲೂಕಿನಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರಜೆ ಘೋಷಿಸಿ ಆದೇಶಿಸಿದ್ದಾರೆ.
ಉಳಿದ ಕಡೆ ಶಾಲೆಗಳಿಗೆ ರಜೆ ಘೋಷಿಸುವ ಅಧಿಕಾರವನ್ನು ತಹಶೀಲ್ದಾರ್ ಗಳಿಗೆ ನೀಡಲಾಗಿದೆ. ಮಳೆ ಪರಿಸ್ಥಿತಿ ನೋಡಿ ರಜೆ ನೀಡಲು ಆಯಾ ತಹಶೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.