alex Certify ಉಪ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗೆ ಒಪ್ಪಿಸಲು ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಪ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗೆ ಒಪ್ಪಿಸಲು ಆದೇಶ

ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆ-2024ರ ಅಂಗವಾಗಿ ಸಂಡೂರು ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ 1959 ಕಲಂ (4), ಕಲಂ (21) ಮತ್ತು ಕಲಂ 24-ಎ(1) ರಡಿ ಸಂಡೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಶಸ್ತ್ರಾಸ್ತ್ರದಾರರ ಶಸ್ತ್ರಾಸ್ತ್ರ (ಫೈರ್ ಆರ್ಮ್ಸ್)ಗಳನ್ನು (ರಾಷ್ಟ್ರೀಕೃತ ಬ್ಯಾಂಕ್‌ಗಳು, ರಿಸರ್ವ್ ಬ್ಯಾಂಕ್ ಅವರಿಂದ ಅನುಮೋದಿಸಿದ ಶೆಡ್ಯೂಲ್ ಬ್ಯಾಂಕ್‌ಗಳ ಸೆಕ್ಯೂರಿಟಿ ಗಾರ್ಡ್ ಗಳ ಆಯುಧಗಳನ್ನು ಹೊರತುಪಡಿಸಿ) ತಕ್ಷಣದಿಂದಲೇ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ನ.25 ರ ವರೆಗೆ ಠೇವಣಿ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.

ಸಂಡೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸಂಡೂರು ತಾಲ್ಲೂಕು, ವೇಣಿ ವೀರಾಪುರ, ಕುಡತಿನಿ(ಬಳ್ಳಾರಿ ತಾಲ್ಲೂಕು), ತಿಮ್ಮಲಾಪುರ, ಏಳುಬೆಂಚಿ(ಕುರುಗೋಡು ತಾಲ್ಲೂಕು) ವ್ಯಾಪ್ತಿಯ ಶಸ್ತ್ರಾಸ್ತ್ರದಾರರು ತಮ್ಮ ಶಸ್ತ್ರಾಸ್ತ್ರಗಳನ್ನು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡಬೇಕು.

ಸೂಚನೆ:

ಸಾರ್ವಜನಿಕರು ಪಡೆದ ‘ಪರವಾನಗಿ ಪಡೆದ ಶಸ್ತ್ರಾಸ್ತ್ರಗಳ ಠೇವಣಿಯಿಂದ ವಿನಾಯಿತಿ ಪಡೆಯಲು ಬಯಸುವವರು ಅ.22 ರೊಳಗಾಗಿ ತಮ್ಮ ಮನವಿಗಳನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದು. ಸಾರ್ವಜನಿಕರಿಂದ ಸ್ವೀಕೃತವಾದ ಮನವಿಗಳನ್ನು “ಸ್ಕ್ರೀನಿಂಗ್ ಕಮಿಟಿ”ಯಲ್ಲಿ ಪರಿಶೀಲಿಸಿ, ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು. ಕಮಿಟಿಯ ನಿರ್ಣಯವು ಅಂತಿಮವಾಗಿರುತ್ತದೆ.

ಸಿ.ಆರ್.ಪಿ.ಸಿ ಕಾಯ್ದೆ 1973 ಕಲಂ 144 ರಡಿ ಯಾವುದೇ ಶಸ್ತ್ರಾಸ್ತ್ರ ಪರವಾನಿಗೆದಾರರು ತಮ್ಮ ಶಸ್ತ್ರಾಸ್ತ್ರವನ್ನು ಚುನಾವಣೆ ಸ್ಥಳ ಮತ್ತು ಸಾರ್ವಜನಿಕ ಸ್ಥಳದಲ್ಲಿ ಹೊತ್ತೊಯ್ಯುವುದು ಮತ್ತು ಪ್ರದರ್ಶನ ಮಾಡುವುದನ್ನು ನಿಷೇಧಿಸಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...