BREAKING NEWS: ‘ಕಾಟೇರ’ ಸಕ್ಸಸ್ ಪಾರ್ಟಿ ಮಾಡಿದ್ದ ಪಬ್ ಲೈಸೆನ್ಸ್ ಅಮಾನತು ಮಾಡಿ ಆದೇಶ

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಚಿತ್ರ ತಂಡದ ಸಕ್ಸಸ್ ಪಾರ್ಟಿ ನಡೆಸಿದ್ದ ಜೆಟ್ ಲ್ಯಾಗ್ ರೆಸ್ಟೋ ಬಾರ್ ಪಬ್ ನ ಲೈಸೆನ್ಸ್ ಅಮಾನತು ಮಾಡಲಾಗಿದೆ.

ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅಬಕಾರಿ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕ್ರಮ ಕೈಗೊಂಡಿದ್ದು, 25 ದಿನಗಳ ಕಾಲ ಮದ್ಯ ಮಾರಾಟ ಮಾಡಲು ನಿಷೇಧ ಹೇರಿದ್ದಾರೆ.

ಈ ಪಬ್ ನಲ್ಲಿ ‘ಕಾಟೇರ’ ಚಿತ್ರತಂಡದಿಂದ ಸಕ್ಸಸ್ ಪಾರ್ಟಿ ಮಾಡಲಾಗಿತ್ತು. ನಟ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿ ಚಿತ್ರರಂಗದ ಹಲವು ನಟರು ಭಾಗಿಯಾಗಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿ ಪೊಲೀಸ್ ವಿಚಾರಣೆ ಕೂಡ ನಡೆಸಲಾಗಿದೆ. ಈಗ 25 ದಿನ ಪಬ್ ಲೈಸೆನ್ಸ್ ಕ್ಯಾನ್ಸಲ್ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read