ಕೊಪ್ಪಳ : ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಮೊಹರಂ ಹಬ್ಬ ನಿಷೇಧಿಸಿ ತಹಶೀಲ್ದಾರ್ ಸಂಜಯ್ ಕಾಂಬ್ಳೆ ಆದೇಶ ಹೊರಡಿಸಿದ್ದಾರೆ.
ಜುಲೈ 29ರವರೆಗೆ ಹುಲಿಹೈದರ್ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕಳೆದ ವರ್ಷ 2 ಗುಂಪುಗಳ ನಡುವೆ ಗಲಾಟೆಯಾಗಿ ಇಬ್ಬರು ಮೃತಪಟ್ಟಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿ 84 ಜನರನ್ನು ಬಂಧಿಸಲಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಹುಲಿಹೈದರ್ ಗ್ರಾಮದಲ್ಲಿ ಮೊಹರಂ ಹಬ್ಬ ನಿಷೇಧಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.