ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಆಟೋ-ಕ್ಯಾಂಟರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಮೂವರು ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ.
ಮೃತ ವಿದ್ಯಾರ್ಥಿನಿಯನ್ನು ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವನಜಾ ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರದ ಗೌರಿಬಿದನೂರಿನ ನಾಗಪ್ಪ ಬ್ಲ್ಯಾಕ್ ಬಳಿ ಈ ಘಟನೆ ನಡೆದಿದೆ. ಗೌರಿಬಿದನೂರಿನ ಕಾಲೇಜಿಗೆ ತೆರಳುತ್ತಿದ್ದ 12 ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ವಿದ್ಯಾರ್ಥಿಗಳು ಆಟೋ ಹಿಡಿದು ಹೋಗುತ್ತಿದ್ದಾಗ ವೇಗವಾಗಿ ಬಂದ ಕ್ಯಾಂಟರ್ ಆಟೋಗೆ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಆಟೋ ನಜ್ಜು ಗುಜ್ಜಾಗಿದೆ.