alex Certify ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

ಮಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರು ಇಂದು ಮಂಗಳೂರಿನ ಯೆನೆಪೋಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ್ದಾರೆ.

ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಮೊದಲಾದವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಆಸ್ಕರ್ ಫರ್ನಾಂಡಿಸ್ ಪತ್ನಿ ಬ್ಲಾಸಂ ಫರ್ನಾಂಡಿಸ್ ಮತ್ತು ಆಸ್ಪತ್ರೆಯ ವೈದ್ಯರೊಂದಿಗೆ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯದ ಮಾಹಿತಿ ಪಡೆದುಕೊಂಡಿದ್ದಾರೆ. ಭಾನುವಾರ ಬೆಳಗ್ಗೆ ಯೋಗ ಮಾಡುವ ಸಂದರ್ಭದಲ್ಲಿ ಆಸ್ಕರ್ ಫರ್ನಾಂಡಿಸ್ ಅವರು ಬಿದ್ದು, ಪೆಟ್ಟಾಗಿದ್ದು, ಯೆನೆಪೋಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...