alex Certify ಆಸ್ತಿ ತೆರಿಗೆ ಪಾವತಿದಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಸೆ. 30ರವರೆಗೆ ಒಟಿಎಸ್ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ತಿ ತೆರಿಗೆ ಪಾವತಿದಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಸೆ. 30ರವರೆಗೆ ಒಟಿಎಸ್ ವಿಸ್ತರಣೆ

ಬೆಂಗಳೂರು: ಬಿಬಿಎಂಪಿ ಆಸ್ತಿ ತೆರಿಗೆದಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಒನ್ ಟೈಮ್ ಸೆಟ್ಲ್ಮೆಂಟ್ ಅವಕಾಶವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ.

ಸೆಪ್ಟೆಂಬರ್ 30ರವರೆಗೆ ಒಟಿಎಸ್ ಮೂಲಕ ತೆರಿಗೆ ಪಾವತಿಗೆ ಅವಕಾಶ ಕಲ್ಪಿಸಲಾಗಿದ್ದು, ಈ ಬಗ್ಗೆ ಸರ್ಕಾರ ಮತ್ತು ಬಿಬಿಎಂಪಿಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಮೊದಲು ಜುಲೈ 31ರವರೆಗೆ ಮಾತ್ರ ಡೆಡ್ ಲೈನ್ ನೀಡಲಾಗಿತ್ತು. ಆಸ್ತಿ ತೆರಿಗೆದಾರದಿಂದ ವಿಸ್ತರಣೆಗೆ ಮನವಿ ಸಲ್ಲಿಕೆ ಹಿನ್ನೆಲೆಯಲ್ಲಿ ಎರಡು ತಿಂಗಳ ಕಾಲ ಒಟಿಎಸ್ ಮೂಲಕ ತೆರಿಗೆ ಪಾವತಿಗೆ ಅವಧಿ ವಿಸ್ತರಣೆ ಮಾಡಲಾಗಿದೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ಸೆ. 30ರವರೆಗೆ ಆಸ್ತಿ ತೆರಿಗೆ ಬಾಕಿ ಪಾವತಿಗೆ ಬಿಬಿಎಂಪಿ ಅವಕಾಶ ಕಲ್ಪಿಸಿದೆ. ಸಂಪೂರ್ಣ ಬಡ್ಡಿ ಮನ್ನಾ ಜೊತೆಗೆ ದಂಡದಲ್ಲಿ ಶೇಕಡ 50ರಷ್ಟು ರಿಯಾಯಿತಿ ನೀಡಲಾಗುವುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...