ಹಾಸನ : ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಮಾಡುವುದು ನಮ್ಮ ಗುರಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿ ಮಾಡುವುದು ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತ ತೆಗೆಯುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ನಮಗೆಷ್ಟು ಕ್ಷೇತ್ರಗಳು ಸಿಗುತ್ತವೆ ಎಂಬುದು ಮುಖ್ಯವಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತ ತೆಗೆದು ಎಲ್ಲಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ.