alex Certify ‘ಹೋಬಳಿಗೊಂದು ವಸತಿ ಶಾಲೆ ನಿರ್ಮಿಸುವುದು ನಮ್ಮ ಗುರಿ’ ; ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಹೋಬಳಿಗೊಂದು ವಸತಿ ಶಾಲೆ ನಿರ್ಮಿಸುವುದು ನಮ್ಮ ಗುರಿ’ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೆಲವು ಹೋಬಳಿಯಲ್ಲಿ ಒಂದಕ್ಕಿಂತ ಹೆಚ್ಚು ವಸತಿ ಶಾಲೆಗಳಿವೆ. ಆದ್ದರಿಂದ ಕೆಲವು ಹೋಬಳಿಗಳಲ್ಲಿ ಇಲ್ಲವಾಗಿತ್ತು. ಹೀಗಾಗಿ ಈ ವರ್ಷ 20 ವಸತಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಿದ್ದೇನೆ. ಹೋಬಳಿಗೊಂದು ವಸತಿ ಶಾಲೆ ನನ್ನ ಗುರಿ ಮತ್ತು ಉದ್ದೇಶವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ದಲಿತ ಸಂಘರ್ಷ ಸಮಿತಿ ರಾಜ್ಯದಲ್ಲಿ ನಡೆಸಿದ, “ನಮಗೆ ಸರಾಯಿ ಅಂಗಡಿ ಬೇಡ, ವಸತಿ ಶಾಲೆ ಬೇಕು” ಎನ್ನುವ ಹೋರಾಟದಿಂದ ಪ್ರೇರಿತನಾಗಿ ಮೊದಲ ಬಜೆಟ್ ಮಂಡಿಸುವ ವೇಳೆ ಗ್ರಾಮೀಣ ಭಾಗದಲ್ಲಿ ಮೊರಾರ್ಜಿ ಶಾಲೆಗಳನ್ನು ಆರಂಭಿಸಿದೆ. ಅವತ್ತಿನಿಂದ ನಿರಂತರವಾಗಿ ಮೊರಾರ್ಜಿ ವಸತಿ ಶಾಲೆಗಳನ್ನು ತೆರೆಯುತ್ತಲೇ ಇದ್ದೇನೆ. ಸದ್ಯ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ 833 ವಸತಿ ಶಾಲೆಗಳಿವೆ. ಅಲ್ಪ ಸಂಖ್ಯಾತ ಇಲಾಖೆಯಡಿಯಲ್ಲಿರುವುದೂ ಸೇರಿ ಒಟ್ಟು 946 ವಸತಿ ಶಾಲೆಗಳಿವೆ. ಕೆಲವು ಹೋಬಳಿಯಲ್ಲಿ ಒಂದಕ್ಕಿಂತ ಹೆಚ್ಚು ವಸತಿ ಶಾಲೆಗಳಿವೆ. ಆದ್ದರಿಂದ ಕೆಲವು ಹೋಬಳಿಗಳಲ್ಲಿ ಇಲ್ಲವಾಗಿತ್ತು. ಹೀಗಾಗಿ ಈ ವರ್ಷ 20 ವಸತಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಿದ್ದೇನೆ. ಹೋಬಳಿಗೊಂದು ವಸತಿ ಶಾಲೆ ನನ್ನ ಗುರಿ ಮತ್ತು ಉದ್ದೇಶವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಹುಟ್ಟುವಾಗ ಎಲ್ಲಾ ಮಕ್ಕಳೂ ವಿಶ್ವ ಮಾನವರಾಗಿ ಹುಟ್ಟಿ ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ ಎನ್ನುವ ಕುವೆಂಪು ಅವರ ಮಾತು ಇಂದಿಗೂ ಸತ್ಯವಾಗಿದೆ. ಮಕ್ಕಳು ಅಲ್ಪ ಮಾನವರಾಗದಂತೆ ಕಾಪಾಡುವ ಜವಾಬ್ದಾರಿ ಶಿಕ್ಷಕರು, ಪೋಷಕರ ಮೇಲಿದೆ. ಬಸವಣ್ಣನವರು 12ನೇ ಶತಮಾನದಲ್ಲೇ ದಲಿತರು ಮತ್ತು ಬ್ರಾಹ್ಮಣರ ನಡುವೆ ಅಂತರ್ಜಾತಿ ವಿವಾಹ ಮಾಡಿಸಿ ಗೆದ್ದರು. ಜಾತಿ ವ್ಯವಸ್ಥೆ ಶಿಥಿಲವಾಗಬೇಕಾದರೆ ದಲಿತರು, ಹಿಂದುಳಿದವರಿಗೆ ಆರ್ಥಿಕ ಶಕ್ತಿ ಬರಬೇಕು, ಸಾಮಾಜಿಕವಾಗಿಯೂ ಶಕ್ತಿ ಬರಬೇಕು. ಈ ಬಗ್ಗೆ ಅಂಬೇಡ್ಕರ್ ಅವರು ಸಂವಿಧಾನ ಸಭೆಯಲ್ಲಿ ಆಡಿದ ಮಾತುಗಳು ಇವತ್ತಿಗೂ ಬಹಳ ಪ್ರಸ್ತುತವಾಗಿದೆ. ಹಿಂದೆ ಮುಂದುವರೆದ ಜಾತಿಯ ಹೆಣ್ಣು ಮಕ್ಕಳಿಗೂ ಶಿಕ್ಷಣ ಕಲಿಯುವ ಅವಕಾಶ ಇರಲಿಲ್ಲ. ಎಲ್ಲಾ ಜಾತಿಯ ಹೆಣ್ಣುಮಕ್ಕಳೂ ಶಿಕ್ಷಣದ ವಿಚಾರದಲ್ಲಿ ಶೋಷಿತರಾಗಿದ್ದವರೇ. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಮುಂದಿರುವುದು ನೋಡಿದರೆ ಖುಷಿ ಆಗುತ್ತದೆ. ಇದಕ್ಕೆ ಕಾರಣವಾದ ನಮ್ಮ ಸಂವಿಧಾನಕ್ಕೆ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕೋಟಿ ಪ್ರಣಾಮಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...