ಬೆಂಗಳೂರು : ಹಸುಗೂಸಿನಿಂದ ಹಿಡಿದು ವಯೋವೃದ್ಧರ ವರೆಗೆ ಪ್ರತಿಯೊಬ್ಬರೂ ನಮ್ಮ ಸರ್ಕಾರದ ಒಂದಿಲ್ಲೊಂದು ಯೋಜನೆಯ ಫಲಾನುಭವಿಗಳಾಗಿದ್ದಾರೆ ಎಂಬುದನ್ನು ಅತ್ಯಂತ ಹೆಮ್ಮೆಯಿಂದ ಹೇಳಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ಹಂಚಿಕೊಂಡಿದ್ದಾರೆ.
ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಹಸುಗೂಸಿನಿಂದ ಹಿಡಿದು ವಯೋವೃದ್ಧರ ವರೆಗೆ ಪ್ರತಿಯೊಬ್ಬರೂ ನಮ್ಮ ಸರ್ಕಾರದ ಒಂದಿಲ್ಲೊಂದು ಯೋಜನೆಯ ಫಲಾನುಭವಿಗಳಾಗಿದ್ದಾರೆ ಎಂಬುದನ್ನು ಅತ್ಯಂತ ಹೆಮ್ಮೆಯಿಂದ ಹೇಳಬಯಸುತ್ತೇನೆ. ಗ್ಯಾರಂಟಿ ಯೋಜನೆಗಳಾದಿಯಾಗಿ ನಮ್ಮ ಸರ್ಕಾರದ ಹಲವು ಜನಪರವಾದ ಕಾರ್ಯಕ್ರಮಗಳು ಸ್ವಾತಂತ್ರ್ಯದ ಈ ಸಂಭ್ರಮವನ್ನು ನೂರ್ಮಡಿಗೊಳಿಸಿದೆ. ಕರುನಾಡಿನಲ್ಲಿ ಸ್ವಾತಂತ್ರ್ಯದ ಸಂಭ್ರಮ ಈ ದಿನಕ್ಕೆ ಸೀಮಿತವಾಗದೆ ನಿತ್ಯೋತ್ಸವವಾಗಿದೆ. ತಮ್ಮೆಲ್ಲರಿಗೂ ಮತ್ತೊಮ್ಮೆ ಸ್ವಾತಂತ್ರ್ಯ ದಿನದ ಶುಭಾಶಯಗಳು ಎಂದು ಎಂದು ಸಿಎಂ ಸಿದ್ದರಾಮಯ್ಯ ಸಂತಸ ಹಂಚಿಕೊಂಡಿದ್ದಾರೆ.
ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ನಾವು ಎದುರಿಸಿದ್ದ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಇಂದು ಸಾಧ್ಯವಾಗಿದೆ ಎಂದು ಹೇಳಲು ಹೆಮ್ಮೆ ಎನಿಸುತ್ತಿದೆ. ಬಡತನ, ಅನಕ್ಷರತೆ, ನಿರುದ್ಯೋಗ ಸಮಸ್ಯೆಗಳನ್ನು ಯಶಸ್ವಿಯಾಗಿ ಎದುರಿಸಿದ್ದೇವೆ. ಆಹಾರ ಉತ್ಪಾದನೆಯಲ್ಲಿ ನಾವು ಸ್ವಾವಲಂಬನೆಯನ್ನು ಸಾಧಿಸಿದ್ದೇವೆ. ಆದರೆ ಜಾತಿ ಮತ್ತು ಧರ್ಮದ ಸೋಗಿನಲ್ಲಿ ಸಾಮಾಜಿಕ ಮತ್ತು ಧಾರ್ಮಿಕ ಸಾಮರಸ್ಯವನ್ನು ಕೆಡಿಸುವ ಪ್ರಯತ್ನ ನಮ್ಮ ಅಭಿವೃದ್ಧಿಯ ಓಟಕ್ಕೆ ತೊಡರುಗಾಲಾಗಿದೆ. ಇಂತಹ ಪ್ರಯತ್ನಗಳನ್ನು ಭಂಗಗೊಳಿಸಿ ಶರಣರು, ಸಂತರು, ಸೂಫಿಗಳು, ದಾರ್ಶನಿಕರು ಜನ್ಮ ತಳೆದ ನಮ್ಮ ಕನ್ನಡನಾಡನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಯೇ ಉಳಿಸಲು ನಮ್ಮ ಸರ್ಕಾರ ಕಟಿಬದ್ಧವಾಗಿದೆ. ನಮ್ಮ ರಾಜ್ಯದ ಸರ್ವರನ್ನೂ ಒಳಗೊಂಡ ಸುಸ್ಥಿರ ಅಭಿವೃದ್ಧಿ ಮಾದರಿ ಇಂದು “ಕರ್ನಾಟಕ ಮಾದರಿ’ ಎಂದು ದೇಶಪ್ರಸಿದ್ಧವಾಗಿದೆ ಎಂದು ಹೇಳಲು ನನಗೆ ಹೆಮ್ಮೆ ಅನಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.