ಬೆಂಗಳೂರು : ಬಿಜೆಪಿ ಸಿದ್ಧಾಂತದ ವಿರುದ್ಧ ನಮ್ಮ ಹೋರಾಟ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಮೈತ್ರಿಕೂಟದ ಸಭೆ ಬಳಿಕ ಮಾತನಾಡಿದ ರಾಹುಲ್ ಗಾಂಧಿ ‘ಬಿಜೆಪಿಯವರು ದೇಶದ ಹಣವನ್ನು ಕೊಳ್ಳೆ ಹೊಡೆಯುತ್ತಿದ್ದಾರೆ. ಇದು ವಿಪಕ್ಷ, ಬಿಜೆಪಿ ವಿರುದ್ಧ ನಡೆಯುತ್ತಿರುವ ಹೋರಾಟವಲ್ಲ. ದೇಶದ ಧ್ವನಿಯನ್ನು ಅಡಗಿಸುತ್ತಿರುವವರ ವಿರುದ್ಧ ಹೋರಾಟವಾಗಿದೆ ಎಂದರು ಇಂಡಿಯಾ ಮತ್ತು ಮೋದಿ ನಡುವಿನ ಸಮರ ಇದು. ಇಂಡಿಯಾ ವಿರುದ್ದ ಯಾರೇ ಸಮರ ಸಾರಿದರೂ ಅದರ ಪರಿಣಾಮ ಏನಾಗುತ್ತೆ ನಿಮಗೇ ಗೊತ್ತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಬಿಜೆಪಿಯವರು ಪ್ರತಿಯೊಂದು ಸೆಕ್ಟರ್ಗಳನ್ನು ನಾಶ ಮಾಡ್ತಿದ್ದಾರೆ. ಪ್ರಧಾನಿ ಮೋದಿ ಇಡೀ ದೇಶದ ವ್ಯವಸ್ಥೆಯನ್ನೇ ಹಾಳು ಮಾಡಿದ್ದಾರೆ, ವಿಮಾನಯಾನ, ರೈಲ್ವೆ ವ್ಯವಸ್ಥೆಯನ್ನೂ ಕೂಡ ಹಾಳು ಮಾಡಿದ್ದಾರೆ ಎಂದು ಮೋದಿ ವಿರುದ್ಧ ಅರವಿಂದ್ ಕೇಜ್ರಿವಾಲ್ ಕಿಡಿಕಾರಿದರು.