ರಾಮನಗರ: ನಮ್ಮ ತೆರಿಗೆ ಹಣವನ್ನು ವಾಪಸ್ ಕೊಟ್ಟಲ್ಲಿ ಮಹಿಳೆಯರಿಗೆ ಈಗಿರುವ ಮಾಸಿಕ 2000 ರೂ. ಜೊತೆಗೆ ಮತ್ತೆ ಎರಡು ಸಾವಿರ ರೂಪಾಯಿ ಸೇರಿಸಿ ಒಟ್ಟು 4000 ರೂ. ಕೊಡುತ್ತೇವೆ ಎಂದು ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.
ಕುದೂರುನಲ್ಲಿ ಕಾಂಗ್ರೆಸ್ ಏರ್ಪಡಿಸಿದ್ದ ಹೋಬಳಿ ಮಟ್ಟದ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ರಾಜ್ಯದ ತೆರಿಗೆ ಹಣವನ್ನು ಬೇರೆ ರಾಜ್ಯಗಳಿಗೆ ತೆಗೆದುಕೊಂಡು ಹೋಗಲಾಗುತ್ತಿದೆ. ಹೀಗಾದರೆ ನಮ್ಮ ಗತಿ ಏನು ಎಂದು ಪ್ರಶ್ನಿಸಿದ್ದಾರೆ.
ನಮ್ಮ ಸರ್ಕಾರ ಜಾರಿಗೆ ತಂದ ಶಕ್ತಿ ಯೋಜನೆಯಿಂದ ಮಹಿಳೆಯರು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ನಮ್ಮ ತೆರಿಗೆ ಹಣವನ್ನು ನಮಗೆ ಕೊಡಿ ಎಂದು ನಾನು ಕೇಳಿದರೆ ವಿಲನ್ ರೀತಿ ನೋಡುತ್ತಾರೆ. ನೀವು ತೆರಿಗೆ ಹಣ ವಾಪಸ್ ಕೊಟ್ಟಲ್ಲಿ ಮಹಿಳೆಯರಿಗೆ 4 ಸಾವಿರ ರೂ. ನೀಡಲಾಗುವುದು ಎಂದು ಹೇಳಿದ್ದಾರೆ.