alex Certify BIG NEWS : ಬಡವರ ಕೋರ್ಟ್ ಕೇಸ್ 6 ತಿಂಗಳಲ್ಲಿ ಇತ್ಯರ್ಥ : ವಿಧಾನಸಭೆಯಲ್ಲಿ ‘ಸಿವಿಲ್ ಪ್ರಕ್ರಿಯಾ ಸಂಹಿತೆ’ ವಿಧೇಯಕ ಅಂಗೀಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಬಡವರ ಕೋರ್ಟ್ ಕೇಸ್ 6 ತಿಂಗಳಲ್ಲಿ ಇತ್ಯರ್ಥ : ವಿಧಾನಸಭೆಯಲ್ಲಿ ‘ಸಿವಿಲ್ ಪ್ರಕ್ರಿಯಾ ಸಂಹಿತೆ’ ವಿಧೇಯಕ ಅಂಗೀಕಾರ

ಬೆಂಗಳೂರು : ಆರ್ಥಿಕವಾಗಿ ದುರ್ಬಲವಾದ ಜನರ ಪ್ರಕರಣಗಳನ್ನು ಆರು ತಿಂಗಳಕಾಲಮಿತಿಯೊಳಗಾಗಿ ಇತ್ಯರ್ಥಪಡಿಸುವ ಉದ್ದೇಶದಿಂದ ವಿಧಾನಸಭೆಯಲ್ಲಿ ‘ಸಿವಿಲ್ ಪ್ರಕ್ರಿಯಾ ಸಂಹಿತೆ’ ವಿಧೇಯಕ ಅಂಗೀಕಾರಗೊಂಡಿದೆ.

ವಿಧಾನಸಭೆಯಲ್ಲಿ ಕರ್ನಾಟಕ ತಿದ್ದುಪಡಿ ವಿಧೇಯಕ 2023′ ಅನ್ನು ಗುರುವಾರ ಮೇಲ್ಮನೆಯಲ್ಲಿ ವಿಪಕ್ಷಗಳ ಸದಸ್ಯರ ಗೈರು ಹಾಜರಿ ನಡುವೆ ಅ೦ಗೀಕರಿಸಲಾಯಿತು.

ವಿಧೇಯಕ ಮಂಡಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ಮಾದರಿಯ ನ್ಯಾಯಾಲಯಗಳಲ್ಲೂ ಸಣ್ಣ, ಅತಿ ಸಣ್ಣ ರೈತರು ಮತ್ತು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಸೇರಿದ ಆರು ತಿಂಗಳ ಕಾಲಮಿತಿಯಲ್ಲಿ ವ್ಯಾಜ್ಯಗಳನ್ನು ಇತ್ಯರ್ಥ ಪಡಿ ಸುವ ನಿಟ್ಟಿನಲ್ಲಿ ‘ಸಿವಿಲ್ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ವಿಧೇಯಕ 2023’ ರೂಪಿಸಲಾಗಿದೆ ಎಂದು ಹೇಳಿದರು.

ದೀರ್ಘಕಾಲದಿಂದ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಆರು ತಿಂಗಳ ಕಾಲಮಿತಿಯೊಳಗಾಗಿ ಇತ್ಯರ್ಥಪಡಿಸಲು ನೆರವಾಗಲಿದೆ ಎಂದರು. ಸಣ್ಣ ರೈತರು ಮತ್ತು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಸೇರಿದ ವ್ಯಕ್ತಿಗಳ ಪ್ರಕರಣಗಳನ್ನು ಆಯಾ ದಿನದ ವಿಚಾರಣೆಯಲ್ಲಿ ಆದ್ಯತೆಯ ಮೇಲೆ ತೆಗೆದುಕೊಳ್ಳಬೇಕು.  ನ್ಯಾಯಾಲಯಗಳಲ್ಲಿ ತ್ವರಿತಗತಿಯ ನ್ಯಾಯದಾನಕ್ಕಾಗಿ ಈ ವಿಧೇಯಕ ರೂಪಿಸಲಾಗಿದೆ ಎಂದರು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...