alex Certify Shocking News: ಬೀದಿ ನಾಯಿಗಳ ದಾಳಿಗೆ ಐದು ವರ್ಷದ ಬಾಲಕ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking News: ಬೀದಿ ನಾಯಿಗಳ ದಾಳಿಗೆ ಐದು ವರ್ಷದ ಬಾಲಕ ಬಲಿ

ತನ್ನ ಸಹೋದರಿಯೊಂದಿಗೆ ವಾಕ್ ಹೋಗುತ್ತಿದ್ದ ಐದು ವರ್ಷದ ಬಾಲಕನೊಬ್ಬ ಬೀದಿ ನಾಯಿಗಳ ದಾಳಿಗೆ ಮೃತಪಟ್ಟಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಗಪುರ ಜಿಲ್ಲೆಯ ಕಟೋಲ್ ಪಟ್ಟಣದಲ್ಲಿ ನಡೆದಿದೆ.

ಶನಿವಾರ ಬೆಳಿಗ್ಗೆ ದಾಂತೋಲಿ ಬಡಾವಣೆಯಲ್ಲಿ ಘಟನೆ ನಡೆದಿದ್ದು ಬಾಲಕ, ಸಹೋದರಿಯೊಂದಿಗೆ ಹೋಗುತ್ತಿದ್ದ ವೇಳೆ ಬೀದಿ ನಾಯಿಗಳು ದಾಳಿ ನಡೆಸಿವೆ. ಈ ವೇಳೆ ಆತನನ್ನು ರಕ್ಷಿಸಲು ಸಹೋದರಿ ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ.

‘ಜಿಮ್’ ನಲ್ಲಿ ವರ್ಕೌಟ್ ಮಾಡಿದ ಬಳಿಕ ಕುಸಿದು ಬಿದ್ದು ಯುವಕ ಸಾವು

ಬಾಲಕನನ್ನು ನಿರ್ಮಾಣ ಹಂತದ ಕಟ್ಟಡವೊಂದರ ಮುಂಭಾಗಕ್ಕೆ ಎಳೆದೊಯ್ದ ನಾಯಿಗಳು ಎಲ್ಲೆಂದರಲ್ಲಿ ಕಚ್ಚಿ ಹಾಕಿವೆ. ಮಗಳಿಂದ ವಿಷಯ ತಿಳಿದ ಪೋಷಕರು ಸ್ಥಳೀಯರೊಂದಿಗೆ ಓಡೋಡಿ ಬಂದಿದ್ದು, ರಕ್ತಸಿಕ್ತವಾಗಿದ್ದ ಬಾಲಕನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...