
ಉತ್ತರಪ್ರದೇಶದ ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ ಆವರಣದಲ್ಲಿ ಭಾನುವಾರ ಬೆಳಗ್ಗೆ ಬೀದಿನಾಯಿಗಳ ಗುಂಪೊಂದು ವ್ಯಕ್ತಿಯೊಬ್ಬನನ್ನು ಕಚ್ಚಿ ಕೊಂದು ಹಾಕಿವೆ.
ಕ್ಯಾಂಪಸ್‌ಗೆ ಹೊಂದಿಕೊಂಡಿರುವ ಪ್ರದೇಶದ ನಿವಾಸಿ ಸಫ್ದರ್ ಅಲಿ ಅವರು ಸರ್ ಸೈಯದ್ ಮ್ಯೂಸಿಯಂನ ಉದ್ಯಾನದಲ್ಲಿ ಬೆಳಗಿನ ವಾಕ್ ಮಾಡಲು ಹೊರಟಿದ್ದಾಗ ನಾಯಿಗಳು ದಾಳಿ ನಡೆಸಿವೆ ಎಂದು ಪೊಲೀಸರು ಹೇಳಿದ್ದಾರೆ.
ಪೊಲೀಸ್ ತಂಡ ಸ್ಥಳಕ್ಕೆ ಧಾವಿಸುವಷ್ಟರಲ್ಲೇ ಅವರು ಸಾವನ್ನಪ್ಪಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ಹೇಳಿದರು.
ನಾಯಿಗಳ ದಾಳಿ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಕ್ಲಿಪ್ ಹರಿದಾಡುತ್ತಿದ್ದು ಭಯ ಹುಟ್ಟಿಸಿದೆ. ಘಟನೆಯ ಬಗ್ಗೆ ವಿಶ್ವವಿದ್ಯಾಲಯ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.