ಬೆಂಗಳೂರು : ‘ವಕ್ಫ್ ಬೋರ್ಡ್’ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದು, ನ.4 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ.
‘ವಕ್ಫ್ ಬೋರ್ಡ್’ ವಿಚಾರದಲ್ಲಿ ರೈತರಿಗೆ ಆತಂಕ ಶುರುವಾಗಿದೆ. ರೈತರ ಜಮೀನಿಗೆ ವಕ್ಫ್ ಬೋರ್ಡ್’ ಕೈ ಹಾಕಿದೆ ಎಂಬ ಆತಂಕ ರೈತರಲ್ಲಿ ಮನೆ ಮಾಡಿದೆ. ಈ ವಿಚಾರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಚುನಾವಣೆ ಹೊತ್ತಲ್ಲೇ ಬಿಜೆಪಿ ಇದನ್ನು ಚುನಾವಣಾ ಅಸ್ತ್ರವಾಗಿ ತೆಗೆದುಕೊಂಡಿದ್ದು, , ನ.4 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ.
ರೈತರ ಜಮೀನು, ದೇವಸ್ಥಾನಗಳ ಆಸ್ತಿಗಳನ್ನು ವಕ್ಫ್ ಮಂಡಳಿ ಹಾಗೂ ಕಾಂಗ್ರೆಸ್ ಸರ್ಕಾರ ಕಬಳಿಸುತ್ತಿದ್ದು, ಇದರ ವಿರುದ್ಧ ನವೆಂಬರ್ 4 ರಿಂದ ಬಿಜೆಪಿ ಹೋರಾಟ ಆರಂಭಿಸಲಾಗುವುದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.