ನವದೆಹಲಿ: ಭಾರತದಲ್ಲಿ ಕೋರೋನಾ ಸೋಂಕಿನಿಂದಾದ ಸಾವಿನ ಸಂಖ್ಯೆ ಕುರಿತು ‘ನ್ಯೂಯಾರ್ಕ್ ಟೈಮ್ಸ್’ ವರದಿ ಮಾಡಿದೆ.
ಸರ್ಕಾರದ ಅಂಕಿಅಂಶದ ಪ್ರಕಾರ, 3 ಲಕ್ಷಕ್ಕೂ ಹೆಚ್ಚು ಸಾವು ಸಂಭವಿಸಿದೆ. ಆದರೆ ನ್ಯೂಯಾರ್ಕ್ ಟೈಮ್ಸ್ ವರದಿಯ ಪ್ರಕಾರ 6 ಲಕ್ಷಕ್ಕೂ ಅಧಿಕ ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ನ್ಯೂಯಾರ್ಕ್ ಟೈಮ್ಸ್ ವರದಿಯನ್ನು ಆಧಾರ ರಹಿತವಾಗಿದೆ ಎಂದು ಕೇಂದ್ರ ಸರ್ಕಾರ ಅಲ್ಲಗಳೆದಿದೆ.
ನ್ಯೂಯಾರ್ಕ್ ಟೈಮ್ಸ್ ವರದಿಗೆ ಪೂರಕವಾದ ಸಾಕ್ಷ್ಯಗಳು ಇಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲವ್ ಅಗರವಾಲ್ ಹೇಳಿದ್ದು, ಸರ್ಕಾರದ ಅಂಕಿ ಅಂಶಗಳು ಖಚಿತವಾದ ಮಾಹಿತಿ ಎಂದು ತಿಳಿಸಿದ್ದಾರೆ.
ನ್ಯೂಯಾರ್ಕ್ ಟೈಮ್ಸ್ ವರದಿಯನ್ನು ಆಧಾರರಹಿತ ಮತ್ತು ಅತಿರೇಕದ ವರದಿ ಎಂದು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ನೀತಿ ಆಯೋಗದ ಸದಸ್ಯ ವಿ.ಕೆ. ಪೌಲ್ ಅವರು, ಕೋವಿಡ್ ನಿಂದ ಸಂಭವಿಸಿದ ಸಾವಿನ ಸಂಖ್ಯೆಗಳ ಕುರಿತಂತೆ ನ್ಯೂಯಾರ್ಕ್ ಟೈಮ್ಸ್ ವರದಿಗೆ ಯಾವುದೇ ಆಧಾರವಿಲ್ಲ ಎಂದು ಹೇಳಿದ್ದಾರೆ.