alex Certify ಯುವತಿಯ ಮನೆಗೆ ನುಗ್ಗಿದ ನೂರು ಜನ; ಸಂಬಂಧಿಕರನ್ನು ಥಳಿಸಿ ಅಪಹರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯುವತಿಯ ಮನೆಗೆ ನುಗ್ಗಿದ ನೂರು ಜನ; ಸಂಬಂಧಿಕರನ್ನು ಥಳಿಸಿ ಅಪಹರಣ

100 ಮಂದಿ ಮನೆಗೆ ನುಗ್ಗಿ ಯುವತಿಯನ್ನು ಅಪಹರಿಸಿರೋ ಘಟನೆ ತೆಲಂಗಾಣದಲ್ಲಿ ನಡೆದಿದೆ. ರಂಗಾರೆಡ್ಡಿ ಜಿಲ್ಲೆಯ ಆದಿಬಟ್ಲಾದಲ್ಲಿ ಶುಕ್ರವಾರ 24 ವರ್ಷದ ಯುವತಿಯನ್ನು ಆಕೆಯ ಮನೆಯಿಂದ ಅಪಹರಿಸಲಾಗಿದೆ ಎಂದು ಆರೋಪಿಸಲಾಗಿದೆ.

ಕನಿಷ್ಠ 100 ಪುರುಷರು ಆಕೆಯ ಮನೆಗೆ ನುಗ್ಗಿ ಬಲವಂತವಾಗಿ ಕರೆದೊಯ್ದಿದ್ದಾರೆ ಎನ್ನಲಾಗಿದೆ. ಅಪಹರಣಕ್ಕೊಳಗಾದ ಯುವತಿಯನ್ನು ವೈಶಾಲಿ ಎಂದು ಗುರುತಿಸಲಾಗಿದೆ. ಮಹಿಳೆಯ ಪೋಷಕರ ಪ್ರಕಾರ ಸುಮಾರು 100 ಪುರುಷರು ಅವರ ಮನೆಗೆ ನುಗ್ಗಿ , ಮನೆಯನ್ನು ಧ್ವಂಸಗೊಳಿಸಿ ತಮ್ಮ ಮಗಳನ್ನು ಬಲವಂತವಾಗಿ ಕರೆದೊಯ್ದಿದ್ದಾರೆ ಎಂದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಪುರುಷರು ಯುವತಿಯ ಸಂಬಂಧಿಕರಿಗೆ ಥಳಿಸುವ ದೃಶ್ಯ ಕಂಡು ಬರುತ್ತದೆ.ಈ ಸಂಬಂಧ ತೆಲಂಗಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...