ದೆಹಲಿ ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಲ್ಲಿ ದಾಖಲಾತಿ ಪಡೆಯಲು 12ನೇ ತರಗತಿವರೆಗೆ 2.3 ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇಲ್ಲಿಯವರೆಗೆ ಶಿಕ್ಷಣ ನಿರ್ದೇಶನಾಲಯವು ನರ್ಸರಿಯಿಂದ 12ನೇ ತರಗತಿಯವರೆಗೆ 2021-22ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಒಟ್ಟು 2,36,522 ಅರ್ಜಿಗಳನ್ನು ಸ್ವೀಕರಿಸಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಇಲ್ಲಿಯವರೆಗೆ 1,58,484 ವಿದ್ಯಾರ್ಥಿಗಳು ದೆಹಲಿ ಸರ್ಕಾರಿ ಶಾಲೆಯಲ್ಲಿ ದಾಖಲಾತಿಯನ್ನು ಪಡೆದಿದ್ದಾರೆ. ದಾಖಲಾತಿ ಪ್ರಕ್ರಿಯೆ ಇನ್ನೂ ಮುಂದುವರಿದಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ಹೊಸ ದಾಖಲಾತಿಯ ಬಳಿಕ 2021-22ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸರ್ಕಾರಿ ಶಾಲೆ ಹಾಗೂ ಕಾಲೇಜುಗಳ ಒಟ್ಟು ದಾಖಲಾತಿಯು 17.67 ಲಕ್ಷ ತಲುಪಿದೆ ಎನ್ನಲಾಗಿದೆ.
2020-21ನೇ ಸಾಲಿನಲ್ಲಿ 16.28 ವಿದ್ಯಾರ್ಥಿಗಳು ದಾಖಲಾಗಿದ್ದರು. 2019-20ನೇ ಸಾಲಿನಲ್ಲಿ 15.05 ಲಕ್ಷ ವಿದ್ಯಾರ್ಥಿಗಳು ದಾಖಲಾಗಿದ್ದರು.