ನವದೆಹಲಿ: ಬಡವರಿಗೆ ಪಕ್ಕಾ ಮನೆಗಳನ್ನು ಒದಗಿಸಲು ಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಅಡಿಯಲ್ಲಿ 2.41 ಕೋಟಿ ಮನೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ.
ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ನೀಡಿದ ಲಿಖಿತ ಉತ್ತರದಲ್ಲಿ ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಈ ವಿಷಯ ತಿಳಿಸಿದ್ದಾರೆ.
ಬಡವರಿಗೆ ಪಕ್ಕಾ ಮನೆಗಳನ್ನು ನೀಡಲು ಸರ್ಕಾರ 2016 ರಿಂದ ಈ ಯೋಜನೆಯನ್ನು ಜಾರಿಗೆ ತರುತ್ತಿದೆ ಎಂದು ಅವರು ಹೇಳಿದ್ದು, ಮುಂದಿನ ವರ್ಷದ ಮಾರ್ಚ್ ವೇಳೆಗೆ 2 ಕೋಟಿ 95 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿಯನ್ನು ಸರ್ಕಾರ ಹೊಂದಿದೆ. ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಈಗಾಗಲೇ ಎರಡು ಕೋಟಿ 93 ಲಕ್ಷ ಮನೆಗಳನ್ನು ಫಲಾನುಭವಿಗಳಿಗೆ ಮಂಜೂರು ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.