alex Certify ಮನೆ ಇಲ್ಲದ ಬಡವರಿಗೆ ಗುಡ್ ನ್ಯೂಸ್: 2.41 ಕೋಟಿ ಮನೆ ನಿರ್ಮಾಣ ಪೂರ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಇಲ್ಲದ ಬಡವರಿಗೆ ಗುಡ್ ನ್ಯೂಸ್: 2.41 ಕೋಟಿ ಮನೆ ನಿರ್ಮಾಣ ಪೂರ್ಣ

ನವದೆಹಲಿ: ಬಡವರಿಗೆ ಪಕ್ಕಾ ಮನೆಗಳನ್ನು ಒದಗಿಸಲು ಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಅಡಿಯಲ್ಲಿ 2.41 ಕೋಟಿ ಮನೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ನೀಡಿದ ಲಿಖಿತ ಉತ್ತರದಲ್ಲಿ ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಈ ವಿಷಯ ತಿಳಿಸಿದ್ದಾರೆ.

ಬಡವರಿಗೆ ಪಕ್ಕಾ ಮನೆಗಳನ್ನು ನೀಡಲು ಸರ್ಕಾರ 2016 ರಿಂದ ಈ ಯೋಜನೆಯನ್ನು ಜಾರಿಗೆ ತರುತ್ತಿದೆ ಎಂದು ಅವರು ಹೇಳಿದ್ದು, ಮುಂದಿನ ವರ್ಷದ ಮಾರ್ಚ್ ವೇಳೆಗೆ 2 ಕೋಟಿ 95 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿಯನ್ನು ಸರ್ಕಾರ ಹೊಂದಿದೆ. ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಈಗಾಗಲೇ ಎರಡು ಕೋಟಿ 93 ಲಕ್ಷ ಮನೆಗಳನ್ನು ಫಲಾನುಭವಿಗಳಿಗೆ ಮಂಜೂರು ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...