64.45 ಕೋಟಿಗೂ ಅಧಿಕ ಕೋವಿಡ್ 19 ಲಸಿಕೆಯ ಡೋಸೇಜ್ಗಳನ್ನು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಉಚಿತವಾಗಿ ಹಾಗೂ ನೇರ ರಾಜ್ಯ ಖರೀದಿ ವಿಭಾಗದಲ್ಲಿ ಒದಗಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಮಾಹಿತಿ ನೀಡಿದೆ.
ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಬಳಿ ಇನ್ನೂ ಬಳಕೆಯಾಗದ 4,78,94,030 ಡೋಸ್ ಲಸಿಕೆಗಳು ಇವೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ದೇಶಾದ್ಯಂತ ಕೊರೊನಾ ಲಸಿಕೆಯ ವೇಗವನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಬದ್ಧವಾಗಿದೆ ಎಂದು ಸಚಿವಾಲಯ ಹೇಳಿದೆ. ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಲಭ್ಯತೆಯ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ ಎಂತಲೂ ಕೇಂದ್ರ ಸಚಿವಾಲಯ ಹೇಳಿದೆ.
ಕೊರೊನಾ ಲಸಿಕೆಯ ಭಾಗವಾಗಿ, ಕೇಂದ್ರ ಸರ್ಕಾರವು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಉಚಿತ ಲಸಿಕೆ ವಿತರಣೆ ಮಾಡುವಲ್ಲಿ ಬೆಂಬಲ ನೀಡುತ್ತಾ ಬಂದಿದೆ.