alex Certify ಕೊರೊನಾ ಲಸಿಕೆ ವಿಚಾರದಲ್ಲಿ ಈ ಹೊಸ ಸಾಧನೆ ಮಾಡಿದೆ ಭಾರತ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಲಸಿಕೆ ವಿಚಾರದಲ್ಲಿ ಈ ಹೊಸ ಸಾಧನೆ ಮಾಡಿದೆ ಭಾರತ….!

ದೇಶದಲ್ಲಿ ಲಸಿಕೆ ಪಡೆಯಲು ಅರ್ಹರಿರುವವರಲ್ಲಿ ಅರ್ಧಕ್ಕೂ ಹೆಚ್ಚು ಪ್ರಮಾಣದ ಜನರು ಈಗಾಗಲೇ ಕನಿಷ್ಟ 1 ಡೋಸ್​ ಲಸಿಕೆ ಸ್ವೀಕರಿಸಿದ್ದಾರೆ ಎಂದು ಸರ್ಕಾರದ ಮಾಹಿತಿಯಲ್ಲಿ ತಿಳಿದುಬಂದಿದೆ.

ಆರೋಗ್ಯ ಕಾರ್ಯಕರ್ತರಲ್ಲಿ 99 ಪ್ರತಿಶತ ಹಾಗೂ ಮುಂಚೂಣಿ ಕಾರ್ಯಕರ್ತರಲ್ಲಿ 100 ಪ್ರತಿಶತ ಮಂದಿ ಕೊರೊನಾ ಲಸಿಕೆ ಪಡೆದಿದ್ದಾರೆ ಎನ್ನಲಾಗಿದೆ.

60 ವರ್ಷ ಮೇಲ್ಪಟ್ಟವರಲ್ಲಿ 60 ಪ್ರತಿಶತಕ್ಕೂ ಅಧಿಕ ಮಂದಿ ಮೊದಲ ಡೋಸ್​ ಕೊರೊನಾ ಲಸಿಕೆಯನ್ನು ಸ್ವೀಕರಿಸಿದ್ದಾರೆ.

ದೇಶದಲ್ಲಿ 47.3 ಕೋಟಿ ಜನತೆಗೆ ಮೊದಲ ಡೋಸ್​ ಲಸಿಕೆಯನ್ನು ಸ್ವೀಕರಿಸಿದ್ದರೆ, 13.8 ಕೋಟಿ ಜನತೆ 2 ಡೋಸ್​ ಲಸಿಕೆಗಳನ್ನು ಸ್ವೀಕರಿಸಿದ್ದಾರೆ. ಕೊರೊನಾ 3ನೇ ಅಲೆಯನ್ನು ನಿಯಂತ್ರಿಸುವ ಸಲುವಾಗಿ ದೇಶದಲ್ಲಿ ಲಸಿಕೆ ಅಭಿಯಾನವನ್ನು ಇನ್ನಷ್ಟು ಚುರುಕುಗೊಳಿಸಲಾಗಿದೆ.

ಇನ್ನು ಈ ವಿಚಾರವಾಗಿ ಟ್ವೀಟ್​ ಮಾಡಿರುವ ಕೇಂದ್ರ ಆರೋಗ್ಯ ಸಚಿವ ಮನ್​ಕುಶ್​ ಮಾಂಡವಿಯಾ, ಭಾರತವು ಅಭೂತಪೂರ್ವ ಯಶಸ್ಸನ್ನು ಸಾಧಿಸಿದೆ..! ಕೊರನಾ ಲಸಿಕೆ ಪಡೆಯುವ ಅರ್ಹರಲ್ಲಿ 50 ಪ್ರತಿಶತ ಮಂದಿ ಮೊದಲ ಡೋಸ್​ ಸ್ವೀಕರಿಸಿದ್ದಾರೆ ಎಂದು ಬರೆದಿದ್ದಾರೆ.

ಈ ವರ್ಷದ ಅಂತ್ಯದಲ್ಲಿ 100 ಪ್ರತಿಶತ ಲಸಿಕೆಯನ್ನು ನೀಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಕಳೆದ ಕೆಲ ವಾರಗಳಿಂದ ದೇಶದ ಯಾವುದೇ ರಾಜ್ಯಗಳಲ್ಲಿ ಕೊರೊನಾ ಲಸಿಕೆಯ ಅಭಾವ ಕಂಡುಬಂದಿಲ್ಲ ಎಂದು ಕೇಂದ್ರ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...