ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ.ಇದುವರೆಗೂ ಮೂರು ಕಂತಿನ ದುಡ್ಡು ಬಾರದೇ ಇದ್ದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಹಾಕುವ ಪ್ರಕ್ರಿಯೆ ನಡೆಯುತ್ತಿದೆ.
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯಲು ಇ-ಕೆವೈಸಿ ಅಪ್ಡೇಟ್ ಮಾಡಿಸಲು ಸೂಚನೆ ನೀಡಲಾಗಿದೆ.ಯೋಜನೆಯಡಿ ಪಡಿತರ ಚೀಟಿ ಹೊಂದಿದ ‘ಕುಟುಂಬದ ಯಜಮಾನಿ’ ಎಂದು ಗುರುತಿಸಲ್ಪಟ್ಟ ಮಹಿಳೆಯರಿಗೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಆಗಸ್ಟ್ – 2023 ರಿಂದ ಮಾಹೆಯಾನ 2000 ರೂ.ಗಳನ್ನು ಡಿಬಿಟಿ ಮೂಲಕ ಹಣ ಜಮೆ ಮಾಡಲಾಗುತ್ತಿದೆ.
* ಯಜಮಾನಿಯರ ಬ್ಯಾಂಕ್ ಖಾತೆಯಲ್ಲಾದ ಹಲವು ತಾಂತ್ರಿಕ ದೋಷಗಳು ಹಾಗೂ ಕೆಲವು ತಾಂತ್ರಿಕ ತೊಂದರೆಗಳಿಂದ ಇನ್ನೂ ಕೆಲವು ಯಜಮಾನಿಯರ ಖಾತೆಗೆ ಹಣ ಬಂದಿಲ್ಲ. ಬ್ಯಾಂಕ್ ಗೆ ಹೋಗಿ ಖಾತೆ ಆ್ಯಕ್ಟಿವ್ ಇದೆಯೋ ಇಲ್ಲವಾ ಪರಿಶೀಲಿಸಿ.
*ನಿಮ್ಮ ಖಾತೆಗೆ ಇನ್ನೂ ಹಣ ಬರದೇ ಇದ್ರೆ ಹತ್ತಿರದ ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿ, ಸಿಡಿಪಿಓ ಅಧಿಕಾರಿಗಳನ್ನು ಭೇಟಿಯಾಗಿ ನಿಮ್ಮ ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಯ ಸ್ವೀಕೃತಿ, ಬ್ಯಾಂಕ್ ಪಾಸ್ ಬುಕ್ (ವಿವರ, ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಪ್ರತಿಯನ್ನು ನೀಡಿ ಅವರ ಬಳಿ ಸಲಹೆಯನ್ನ ಪಡೆದುಕೊಳ್ಳಿ, ಏಕೆ ಹಣ ಬರಲಿಲ್ಲ, ಏನು ಸಮಸ್ಯೆಯಾಗಿದೆ..ಏನು ಮಾಡಬೇಕು ಎಂಬ ಸಲಹೆ ಪಡೆಯಿರಿ.
*ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಹಣ ಬಾರದೇ ಇರುವವರು ಮುಖ್ಯವಾಗಿ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಒಂದು ವೇಳೆ ಇದನ್ನು ಮಾಡದಿದ್ದರೆ ಗೃಹಲಕ್ಷ್ಮಿಯರ ಖಾತೆಗೆ ಹಣ ಬರಲ್ಲ. ಹೀಗಾಗಿ ಕೂಡಲೇ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.
*ಗೃಹಲಕ್ಷ್ಮಿ ಫಲಾನುಭವಿಗಳು ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್ ಖಾತೆ ಆಧಾರ್ ಲಿಂಕ್ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹ ಲಕ್ಷ್ಮಿ ಅದಾಲತ್ ಆಯೋಜಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.ಈ ನಿಟ್ಟಿನಲ್ಲಿ ಅರ್ಜಿ ಸಲ್ಲಿಸಿದ ಎಲ್ಲಾ ಯಜಮಾನಿಯರ ಖಾತೆಗೆ ಹಣ ಹಾಕುವ ನಿಟ್ಟಿನಲ್ಲಿ ಸರ್ಕಾರ ತೊಡಗಿದೆ.