alex Certify ಪಂಚಾಯಿತಿ ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇ- ಆಸ್ತಿ ತಂತ್ರಾಂಶ ಮುಂದುವರಿಸಲು ನಗರಾಭಿವೃದ್ಧಿ ಇಲಾಖೆ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಂಚಾಯಿತಿ ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇ- ಆಸ್ತಿ ತಂತ್ರಾಂಶ ಮುಂದುವರಿಸಲು ನಗರಾಭಿವೃದ್ಧಿ ಇಲಾಖೆ ಆದೇಶ

ಬೆಂಗಳೂರು: ಪೌರ ಸಂಸ್ಥೆಗಳಾಗಿ ಮೇಲ್ದರ್ಜೆಗೇರಿಸಲಾದ ಪಂಚಾಯಿತಿಗಳ ವ್ಯಾಪ್ತಿಯ ಅನಧಿಕೃತ ಆಸ್ತಿಗಳ ಮಾಲೀಕರಿಗೆ ಅನುಕೂಲ ಮಾಡಿಕೊಡಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ.

ನಗರ ಸ್ಥಳೀಯ ಸಂಸ್ಥೆಗಳಾಗಿ ಮೇಲ್ದರ್ಜೆಗೇರಿಸಲಾದ ಗ್ರಾಮ ಪಂಚಾಯಿತಿಗಳ ಆಸ್ತಿಗಳನ್ನು ಇ-ಆಸ್ತಿ ತಂತ್ರಾಂಶದಲ್ಲಿ ಮುಂದುವರೆಸಲು ನಗರಾಭಿವೃದ್ಧಿ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಳೆದ ವಾರ ಕೈಗೊಂಡ ನಿರ್ದೇಶನ ಆಧರಿಸಿ ಈ ಆದೇಶ ಹೊರಡಿಸಲಾಗಿದೆ. 2017ರ ಮಾರ್ಚ್ 22ಕ್ಕೂ ಮೊದಲಿನ ಆಸ್ತಿಗಳಿಗೆ ಈ ಆದೇಶ ಅನ್ವಯವಾಗುತ್ತದೆ. ಈ ತೀರ್ಮಾನದ ಅನುಷ್ಠಾನದ ಹಂತದಲ್ಲಿ ಯಾವುದೇ ಗೊಂದಲ ಸೃಷ್ಟಿಯಾದಲ್ಲಿ, ಗೊಂದಲ ಪರಿಹಾರಕ್ಕೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...