ಕಲಬುರಗಿ: ಆಕ್ಸಿಜನ್ ಖಾಲಿಯಾದ ಪರಿಣಾಮ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.
ಕಲಬುರ್ಗಿಯ ಖಾಸಗಿ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಸೋಂಕಿತರನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಕಲ್ಬುರ್ಗಿ ನಗರದ ಖಾಜ ಬಂದೇ ನವಾಜ ಆಸ್ಪತ್ರೆಯ ಕೋವಿಡ್ ಸೆಂಟರ್ ಐಸಿಯುನಲ್ಲಿ ಘಟನೆ ನಡೆದಿದೆ. ಆಮ್ಲಜನಕದ ಕೊರತೆಯಿಂದ ರೋಗಿಗಳು ಮೃತಪಟ್ಟ ಮಾಹಿತಿ ತಿಳಿದ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.