
ಬೆಳಗಾವಿ: ಬೆಳಗಾವಿ ಜಿಲ್ಲೆಯ ಕುಡಚಿ ಶಾಸಕ ಪಿ. ರಾಜೀವ್ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.
ಕುಡಚಿ ಮತ ಕ್ಷೇತ್ರದಲ್ಲಿ ಏಪ್ರಿಲ್ 29ರಂದು ನಡೆದ ಬಿಜೆಪಿ ಸಮಾವೇಶಕ್ಕೆ ಹೆಚ್ಚಿನ ಜನರನ್ನು ಸೇರಿಸಲು ಹಣ ಹಂಚಿಕೆ ಮಾಡಿ ಆಮಿಷ ತೋರಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಶಾಸಕ ಪಿ. ರಾಜೀವ್ ಸೇರಿದಂತೆ ಇಬ್ಬರ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದ ಬಿಜೆಪಿ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ಉದ್ದೇಶದಿಂದ ಮುಗಳಖೋಡ ಪಟ್ಟಣದ ಸಮೀಪ ಹಣ ಹಂಚಿಕೆ ಮಾಡಿ ಆಮಿಷ ಒಡ್ಡಲಾಗಿದೆ ಎಂದು ವರದಿಯಾಗಿತ್ತು ಹಾಗೂ ಜಾಲತಾಣಗಳಲ್ಲಿ ವರದಿಯ ಪ್ರತಿಕ್ರಿಯೆ ಆಧರಿಸಿ ದೂರು ನೀಡಲಾಗಿದೆ ಎಂದು ಹೇಳಲಾಗಿದೆ.