ಹೊಸಪೇಟೆ: ತಾಂಡಾಗಳಿಂದ ಜನರು ವಲಸೆ ಹೋಗುವುದನ್ನು ತಡೆಯುವ ಮುಖ್ಯ ಉದ್ದೇಶದಿಂದ ತಾಂಡಾಗಳಲ್ಲಿ ಉದ್ಯೋಗ ಸೃಷ್ಟಿಗೆ ರೋಜಗಾರ್ ಮಿತ್ರ ಯೋಜನೆ ಜಾರಿಗೆ ತರಲಾಗಿದೆ ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಪಿ ರಾಜೀವ್ ತಿಳಿಸಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಂಡಾ ಜನರ ವಲಸೆ ತಡೆಯುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ತಾಂಡಾ ನಿಗಮದ ಸಹಭಾಗಿತ್ವದಲ್ಲಿ ತಾಂಡಾ ರೋಜಗಾರ್ ಮಿತ್ರ ಯೋಜನೆ ಜಾರಿಗೆ ತರಲಾಗಿದೆ. 300 ಮಂದಿ ಯುವಕರನ್ನು ನಿಗಮದಿಂದ ರೋಜಗಾರ್ ಮಿತ್ರ ಎಂದು ನೇಮಕ ಮಾಡಿಕೊಳ್ಳಲಾಗುವುದು ತಾಂಡಾ ಜನರ ಸುರಕ್ಷತೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮಂಡ್ಯದಲ್ಲಿ ಇತ್ತೀಚೆಗೆ ಕೊಲೆಯಾದ ಬಾಲಕಿ ಕುಟುಂಬಕ್ಕೆ ಸರ್ಕಾರದಿಂದ 8:50 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ. ಆರೋಪಿ ಬಂಧಿಸಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.