alex Certify ಸಂಕಷ್ಟದಲ್ಲಿರುವವರಿಗೆ ಸಿಹಿ ಸುದ್ದಿ, ಎರಡನೇ ಪ್ಯಾಕೇಜ್ ಘೋಷಣೆಗೆ ಒಪ್ಪಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಕಷ್ಟದಲ್ಲಿರುವವರಿಗೆ ಸಿಹಿ ಸುದ್ದಿ, ಎರಡನೇ ಪ್ಯಾಕೇಜ್ ಘೋಷಣೆಗೆ ಒಪ್ಪಿಗೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾದಿಂದಾಗಿ ಸಂಕಷ್ಟಕ್ಕೆ ಒಳಗಾದವರಿಗೆ ವಿಶೇಷ ಪ್ಯಾಕೇಜ್ ನೀಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಶೀಘ್ರದಲ್ಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎರಡನೇ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ.

ಕೊರೋನಾ ಮತ್ತು ಲಾಕ್ಡೌನ್ ಕಾರಣದಿಂದ ಅನೇಕ ವರ್ಗದವರು ಸಂಕಷ್ಟಕ್ಕೆ ಸಿಲುಕಿದ್ದು, ಅಂತವರಿಗೆ ನೆರವು ನೀಡಲು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಬಳಿಕ ಘೋಷಣೆ ಮಾಡಲಾಗುವುದು.

ಇತ್ತೀಚೆಗಷ್ಟೇ ಆಟೋ ಚಾಲಕರು ಸೇರಿದಂತೆ ಅನೇಕ ವಲಯದವರಿಗೆ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಇನ್ನೂ ಹಲವು ವಲಯದಿಂದ ಪ್ಯಾಕೇಜ್ ಗೆ ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...