ನವದೆಹಲಿ: ಕೊರೋನಾ ಎರಡನೇ ಅಲೆಯಿಂದಾಗಿ ದೇಶದ ಹಲವೆಡೆ ಲಾಕ್ ಡೌನ್ ಜಾರಿ ಜಾರಿ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ವಿಶೇಷ ಪ್ಯಾಕೇಜ್ ನೀಡಲು ಚಿಂತನೆ ನಡೆಸಲಾಗಿದೆ.
ಕೇಂದ್ರದಿಂದ ಎರಡನೇ ಆರ್ಥಿಕ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಚರ್ಚೆ ನಡೆಸಲಿದ್ದಾರೆ. ಆರ್ಥಿಕ ಪುನಶ್ಚೇತನ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದ್ದು, ಹೋಟೆಲ್, ಟ್ರಾವೆಲ್, ಟೂರಿಸಂ ಕ್ಷೇತ್ರಕ್ಕೆ ಪ್ಯಾಕೇಜ್ ನೀಡಬಹುದು. ಎಂಎಸ್ಎಂಇ ವಲಯಕ್ಕೂ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ.
ಕಳೆದ ವರ್ಷ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ನೀಡಿದ್ದ ಕೇಂದ್ರ ಈ ಬಾರಿ ಎಷ್ಟು ಲಕ್ಷ ಕೋಟಿ ಪ್ಯಾಕೇಜ್ ನೀಡಲಿದೆ ಎಂಬುದರ ಸ್ಪಷ್ಟತೆ ಇಲ್ಲವಾಗಿದೆ.