ಬೆಂಗಳೂರು: ಮುಡಾ ಹಗರಣ ಸೇರಿದಂತೆ ವಿವಿಧ ಹಗರಣಗಳ ವಿರುದ್ಧ ವಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಹೋರಾಟ ಕೈಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಪದತ್ಯಾಗಕ್ಕೆ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ಇಂದಿನಿಂದ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಕೆಂಗೇರಿಯಲ್ಲಿ ಇಂದು ಬೆಳಗ್ಗೆ ಪಾದಯಾತ್ರೆಗೆ ಚಾಲನೆ ದೊರೆಯಲಿದ್ದು, ಎಂಟು ದಿನ ನಡೆಯಲಿದೆ. ಆಗಸ್ಟ್ 10ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆಯೊಂದಿಗೆ ಪಾದಯಾತ್ರೆ ಮುಕ್ತಾಯವಾಗಲಿದೆ.
ಬಿಜೆಪಿ ನಾಯಕರು ಜೆಡಿಎಸ್ ಜೊತೆ ಸೇರಿ ಮುಡಾ ಅಕ್ರಮ ನಿವೇಶನ ಹಗರಣ ಮುಂದಿಟ್ಟುಕೊಂಡು ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.