
ಹುಬ್ಬಳ್ಳಿ: ದೀಪಾವಳಿ ಹೊತ್ತಲ್ಲೇ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಹಬ್ಬ ಮುಗಿದ ನಂತರ ಭತ್ತ ಖರೀದಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಭತ್ತ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ಬೇಡಿಕೆ ಇದ್ದು, ರಾಯಚೂರು, ಕೊಪ್ಪಳ ಸೇರಿದಂತೆ ವಿವಿಧ ಭಾಗಗಳಲ್ಲಿ ಖರೀದಿ ಕೇಂದ್ರಗಳ ಆರಂಭಕ್ಕೆ ಬೇಡಿಕೆ ಬಂದ ಹಿನ್ನೆಲೆಯಲ್ಲಿ ದೀಪಾವಳಿ ಮುಗಿದ ಕೂಡಲೇ MSP ದರದಲ್ಲಿ ಭತ್ತ ಖರೀದಿಸಲಾಗುವುದು. ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ದೀಪಾವಳಿ ಮುಗಿದ ನಂತರ ಸರ್ಕಾರದಿಂದ ಭತ್ತ ಖರೀದಿ ಮಾಡಲಾಗುತ್ತದೆ. ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ