ನವದೆಹಲಿ: 76ನೇ ಗಣರಾಜ್ಯೋತ್ಸವ ಹಿನ್ನೆಲೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಕೊಪ್ಪಳದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ.
ತೊಗಲುಗೊಂಬೆ ಆಟದ ಹಿರಿಯ ಕಲಾವಿದರಾದ ಭೀಮವ್ವ ದೊಡ್ಡಬಾಳಪ್ಪ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ.
ಜಾನಪದ ಗಾಯಕ ವೆಂಕಪ್ಪ ಅಂಬಾಜಿ ಸುಗಟೇಕರ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ಬಾಗಲಕೋಟೆ ಜಿಲ್ಲೆಯ ಜಾನಪದ ಗಾಯಕ ವೆಂಕಪ್ಪ ಅಂಬಾಜಿಗೆ ಮತ್ತು ಕರ್ನಾಟಕದ ವೈದ್ಯೆ ಡಾ. ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ದೇಶದ ಹೆಸರಾಂತ ಕ್ಯಾನ್ಸರ್ ತಜ್ಞೆಯಾಗಿರುವ ಡಾ. ವಿಜಯಲಕ್ಷ್ಮಿ ಅವರು ಕರ್ನಾಟಕದ ಕಲಬುರ್ಗಿ ಮೂಲದವರಾಗಿದ್ದಾರೆ. ರೋಗಿಗಳ ಪಾಲಿನ ಧನ್ವಂತರಿ ಎಂದೇ ಖ್ಯಾತರಾಗಿದ್ದಾರೆ/
ಗರ್ಭಕಂಠದ ಕ್ಯಾನ್ಸರ್ ಪತ್ತೆ, ತಡೆಗಟ್ಟುವಿಕೆ ಮತ್ತು ನಿರ್ವಹಣೆಯಲ್ಲಿ ವಿಶೇಷ ಗಮನಹರಿಸುವ ದೆಹಲಿಯ ಸ್ತ್ರೀರೋಗ ತಜ್ಞೆ ಡಾ. ನೀರ್ಜಾ ಭಟ್ಲಾ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ.
ಭೋಜ್‌ಪುರದ ಸಮಾಜ ಸೇವಕ ಭೀಮ್ ಸಿಂಗ್ ಭವೇಶ್ ಅವರಿಗೆ ‘ನಯೀ ಆಶಾ’ ಫೌಂಡೇಶನ್ ಮೂಲಕ ಕಳೆದ 22 ವರ್ಷಗಳಿಂದ ಸಮಾಜದ ಅತ್ಯಂತ ಅಂಚಿನಲ್ಲಿರುವ ಗುಂಪಿನಲ್ಲಿ ಒಂದಾದ ಮುಸಾಹರ್ ಸಮುದಾಯದ ಉನ್ನತಿಗಾಗಿ ಅವಿಶ್ರಾಂತವಾಗಿ ಶ್ರಮಿಸಿದ್ದಕ್ಕಾಗಿ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ.
ಪಿ ದಚ್ಚನಮೂರ್ತಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ಅವರು ದಕ್ಷಿಣ ಭಾರತೀಯ ಸಂಗೀತ ಮತ್ತು ಸಂಸ್ಕೃತಿಗೆ ಪ್ರಮುಖವಾದ ಶಾಸ್ತ್ರೀಯ ತಾಳವಾದ್ಯವಾದ ಥವಿಲ್‌ನಲ್ಲಿ ಪರಿಣತಿ ಹೊಂದಿರುವ ವಾದ್ಯಗಾರರಾಗಿದ್ದು, 5 ದಶಕಗಳಿಗೂ ಹೆಚ್ಚು ಅನುಭವ ಹೊಂದಿದ್ದಾರೆ.
ಎಲ್ ಹ್ಯಾಂಗ್ಥಿಂಗ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ಅವರು ನಾಗಾಲ್ಯಾಂಡ್‌ನ ನೋಕ್ಲಾಕ್‌ನ ಹಣ್ಣಿನ ರೈತ, ಸ್ಥಳೀಯವಲ್ಲದ ಹಣ್ಣುಗಳನ್ನು ಬೆಳೆಸುವಲ್ಲಿ 30 ವರ್ಷಗಳಿಗೂ ಹೆಚ್ಚು ಪರಿಣತಿ ಹೊಂದಿದ್ದಾರೆ.