ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ 11 ನೇ ದಿನದ ಕಾರ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುನೀತ್ ಕುಟುಂಬದವರ ಜೊತೆಗೆ ಸರ್ಕಾರ ಇದೆ. 11 ನೇ ದಿನದ ಕಾರ್ಯದಲ್ಲಿ ಭಾಗಿಯಾಗುವಂತೆ ತಿಳಿಸಿದ್ದು, ಭಾಗಿಯಾಗಲಿದ್ದೇನೆ. ಪುನೀತ್ ರಾಜಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡುವ ಕುರಿತಂತೆ ಸೂಕ್ತ ಸಮಯದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ನಟ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂಬ ಕುರಿತು ತೀರ್ಮಾನ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ಸಾಧ್ಯತೆ ಇದೆ. ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡಬೇಕೆಂಬ ಒತ್ತಾಯ ಕೇಳಿಬಂದ ಹಿನ್ನಲೆಯಲ್ಲಿ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.