
ಬೆಳಗಾವಿ: ಪಾಗಲ್ ಪ್ರೇಮಿಯ ಕಾಟಕ್ಕೆ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಸಿದ್ದಲಿಂಗ ಪೂಜಾರಿ ಎಂಬಾತ ಬಾಲಕಿಯ ಹಿಂದೆ ಬಿದ್ದು, ಪ್ರೀತಿಸುವಂತೆ ಒತ್ತಾಯಿಸುದ್ದನಂತೆ. ಇದರಿಂದ ಬೇಸತ್ತ ಬಾಲಕಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬಾಲಕಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.
ಬೆಳಗಾವಿಯ ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿ ಸಿದ್ದಲಿಂಗ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ.