ಬೆಂಗಳೂರು: ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಉಪಚುನಾವಣೆಯಲ್ಲಿ ಮತ ಚಲಾಯಿಸಲು ಕಾರ್ಮಿಕರಿಗೆ ಅನುಕೂಲವಾಗುವಂತೆ ವೇತನ ಸಹಿತ ರಜೆ ಘೋಷಿಸಲಾಗಿದೆ.
ಭಾರತ ಚುನಾವಣಾ ಆಯೋಗ ರಜೆ ಘೋಷಣೆ ಮಾಡಿದೆ. ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭೆ ಕ್ಷೇತ್ರದಲ್ಲಿ ಮೇ 7ರಂದು ಲೋಕಸಭೆ ಚುನಾವಣೆ ಜೊತೆಗೆ ಉಪಚುನಾವಣೆ ನಿಗದಿಯಾಗಿದೆ.
ಆಯಾ ಕ್ಷೇತ್ರಗಳ ಮತದಾರರು ಮತದಾನದ ದಿನಗಳಂದು ಮತ ಚಲಾಯಿಸಲು ಅನುಕೂಲ ಮಾಡಿಕೊಡಲು ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು, ಅಂಗಡಿಗಳು, ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕೆಂದು ಚುನಾವಣಾ ಆಯೋಗ ಆದೇಶ ನೀಡಿದ್ದು, ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.