ಇತ್ತೀಚಿಗೆ ಯುವಕರಲ್ಲಿ ಹಠಾತ್ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಕೆಲಸ ಮಾಡುತ್ತಿದ್ದ ವೇಳೆಯೇ ಯುವಕರಿಗೆ ಯಾವುದೇ ಸುಳಿವು ಸಿಗದೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣಗಳು ವೈದ್ಯಕೀಯ ಕ್ಷೇತ್ರ ಸೇರಿದಂತೆ ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದೆ.
ಆಘಾತಕಾರಿ ಎಂಬಂತೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಹಠಾತ್ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ವ್ಯಕ್ತಿ ಇದ್ದಕ್ಕಿದ್ದಂತೆ ಕುಸಿದು ನೆಲದ ಮೇಲೆ ಬಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಡಿಸೆಂಬರ್ 26ರಂದು ಈ ಘಟನೆ ನಡೆದಿದ್ದು, ಎಲ್ಲಿ ನಡೆದಿದೆ ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.
ಮೃತ ವ್ಯಕ್ತಿ ಆಶಿಶ್ ಪೇಂಟರ್ ಆಗಿದ್ದರು. ವರದಿಗಳ ಪ್ರಕಾರ ಆಶಿಶ್ ಇಂದೋರ್‌ನ ಸೈಟ್‌ನಲ್ಲಿ ಕೆಲಸ ಮಾಡುವಾಗ ಅಸ್ವಸ್ಥತೆಯನ್ನು ಅನುಭವಿಸಿದ್ದಾರೆ. ಹೀಗಾಗಿ ಅವರು ಕೆಲಸದಿಂದ ವಿರಾಮ ತೆಗೆದುಕೊಂಡು ಪೇಂಟ್ ಬಕೆಟ್ ಮೇಲೆ ಕುಳಿತಿದ್ದಾರೆ. ಸ್ವಲ್ಪ ಸಮಯದ ನಂತರ ಅವರು ಇದ್ದಕ್ಕಿದ್ದಂತೆ ನೆಲದ ಮೇಲೆ ಬೀಳುತ್ತಾರೆ. ಅಲ್ಲೇ ಕೆಲಸ ಮಾಡುತ್ತಿದ್ದ ಇಬ್ಬರು ತಕ್ಷಣ ಸಹಾಯಕ್ಕಾಗಿ ಓಡಿಬಂದು ಅವರನ್ನು ಬದುಕಿಸಲು ಪ್ರಯತ್ನಿಸುತ್ತಾರೆ. ಆದರೆ ಪೈಂಟರ್ ಆಶಿಶ್
ಹೃದಯಾಘಾತದಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.