alex Certify ಟಿ-20ಯಲ್ಲಿ ಭಾರತವನ್ನು ಸೋಲಿಸಿದರೆ ಜಿಂಬಾಬ್ವೆ ಯುವಕನನ್ನು ಮದ್ವೆಯಾಗುತ್ತೇನೆ ಎಂದ ಪಾಕ್​ ನಟಿ…..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಿ-20ಯಲ್ಲಿ ಭಾರತವನ್ನು ಸೋಲಿಸಿದರೆ ಜಿಂಬಾಬ್ವೆ ಯುವಕನನ್ನು ಮದ್ವೆಯಾಗುತ್ತೇನೆ ಎಂದ ಪಾಕ್​ ನಟಿ…..!

ಆಸ್ಟ್ರೇಲಿಯಾ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡ ತನ್ನ ಕಳಪೆ ಪ್ರದರ್ಶನದಿಂದಾಗಿ ಟೂರ್ನಿಯಿಂದ ಹೊರಬೀಳುವ ಆತಂಕದಲ್ಲಿದೆ. ಟೂರ್ನಿಯ ಸೂಪರ್‌-12ರ ಹಂತ ಸದ್ಯ ತೀವ್ರ ಕುತೂಹಲದಿಂದ ಸಾಗುತ್ತಿದೆ. ಯಾವ ತಂಡಗಳು ಸೆಮಿಫೈನಲ್‌ ತಲುಪಲಿವೆ ಎಂದು ಇನ್ನೂ ಸ್ಪಷ್ಟವಾಗಿ ಹೇಳಲಾಗುತ್ತಿಲ್ಲ. ಆದರೆ, ಟೀಮ್‌ ಇಂಡಿಯಾ ಎರಡನೇ ಗುಂಪಿನ ಪಾಯಿಂಟ್ಸ್‌ ಟೇಬಲ್‌ನಲ್ಲಿ 6 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿರುವ ಮೂಲಕ ಸೆಮಿ ಹಾದಿಯನ್ನು ಬಹುತೇಕ ಖಚಿತಪಡಿಸಿಕೊಂಡಿದೆ. ಪಾಕ್ ತಂಡ ನಾಕ್-ಔಟ್ ರೇಸ್ ತಲುಪಲು ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಭಾರೀ ಅಂತರದಲ್ಲಿ ಗೆಲ್ಲಬೇಕಿದೆ.

ಈ ನಡುವೆ ಟೀಂ ಇಂಡಿಯಾವನ್ನು ಈ ಹಿಂದೆ ಹಲವು ಬಾರಿ ಟೀಕಿಸಿದ್ದ ಪಾಕಿಸ್ತಾನಿ ನಟಿ ಸೆಹರ್ ಶಿನ್ವಾರಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ನವೆಂಬರ್ 6 ರಂದು ನಡೆಯುವ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಜಿಂಬಾಬ್ವೆ ತಂಡ ಮಣಿಸಿದರೆ ಆ ದೇಶದ ವ್ಯಕ್ತಿಯನ್ನು ಮದುವೆಯಾಗುವುದಾಗಿ ಪಾಕ್ ನಟಿ ಟ್ವೀಟ್​ನಲ್ಲಿ ಹೇಳಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸೆಹರ್ ಶಿನ್ವಾರಿ, ‘ಮುಂದಿನ ಪಂದ್ಯದಲ್ಲಿ ಜಿಂಬಾಬ್ವೆ ಭಾರತವನ್ನು ಸೋಲಿಸಿದರೆ, ನಾನು ಆ ದೇಶದ ಪ್ರಜೆಯನ್ನು ಮದುವೆಯಾಗುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.

ಭಾನುವಾರದ ಪಂದ್ಯದಲ್ಲಿ ರೋಹಿತ್‌ ಶರ್ಮಾ ನಾಯಕತ್ವದ ಭಾರತ ತಂಡವನ್ನು ಸೋಲಿಸಿದರೆ ಜಿಂಬಾಬ್ವೆ ಹುಡುಗನನ್ನು ಮದುವೆಯಾಗುತ್ತೇನೆ ಎಂದಿದ್ದಾರೆ. ಪಾಕಿಸ್ತಾನದ ನಟಿಯ ಈ ಟ್ವೀಟ್ ಸಿಕ್ಕಾಪಟ್ಟೆ ವೈರಲ್‌ ಆಗಿದೆ ಹಾಗೂ ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಮೂಡಿಬರುತ್ತಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...