alex Certify ಭಯೋತ್ಪಾದಕರ ದಾಳಿಯಲ್ಲಿ ಸೇನಾ ನಾಯಕ ಸೇರಿ ಪಾಕಿಸ್ತಾನದ 12 ಯೋಧರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಯೋತ್ಪಾದಕರ ದಾಳಿಯಲ್ಲಿ ಸೇನಾ ನಾಯಕ ಸೇರಿ ಪಾಕಿಸ್ತಾನದ 12 ಯೋಧರ ಸಾವು

ಪಾಕಿಸ್ತಾನದ ಸೇನಾ ನಾಯಕ ಸೇರಿ 12 ಯೋಧರು ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಖೈಬರ್ ಪಖ್ತುನ್ಖ್ವಾದಲ್ಲಿ ಪ್ರಾಂತ್ಯದಲ್ಲಿ ಭಯೋತ್ಪಾದಕರು ಪಾಕಿಸ್ತಾನ ಸೇನಾ ತಂಡದ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಸೇನಾನಾಯಕ ಸೇರಿ 12 ಮಂದಿ ಸೈನಿಕರು ಮೃತಪಟ್ಟಿದ್ದಾರೆ.

ಭಯೋತ್ಪಾದಕರು ಈ ಪ್ರದೇಶದಲ್ಲಿ ಕೆಲವು ನಾಗರಿಕರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ. ಅಧಿಕಾರಿಯನ್ನು ಕ್ಯಾಪ್ಟನ್ ಅಬ್ದುಲ್ ಬಸಿತ್ ಎಂದು ಗುರುತಿಸಲಾಗಿದೆ. ಭಯೋತ್ಪಾದಕರ ದಾಳಿಯಲ್ಲಿ 15 ಸೈನಿಕರು ಗಾಯಗೊಂಡಿದ್ದಾರೆ.

ಪಾಕಿಸ್ತಾನ ಸೇನೆ ಖುರ್ರಾಮ್ ಪ್ರದೇಶದಲ್ಲಿ ಪ್ರತೀಕಾರದ ಕಾರ್ಯಾಚರಣೆ ಕೈಗೊಂಡಿತ್ತು. ಕ್ಯಾಪ್ಟನ್ ಬಸಿತ್ ಪಾಕಿಸ್ತಾನ ಸೇನೆಯ ರಕ್ಷಣಾ ಕಾರ್ಯಾಚರಣೆ ಮುನ್ನಡೆಸುತ್ತಿದ್ದರು. ಈ ಪ್ರದೇಶದಲ್ಲಿ 6 ಮಂದಿ ಟೆಲಿಕಾಂ ಕಾರ್ಮಿಕರನ್ನು ಭಯೋತ್ಪಾದಕರು ಅಪಹರಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂದು ಪಾಕಿಸ್ತಾನ ಮಿಲಿಟರಿ ಮಾಧ್ಯಮ ವಿಭಾಗವಾದ ISPR ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...