ನೆರೆ ರಾಷ್ಟ್ರ ಪಾಕಿಸ್ತಾನ ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಸಕಾಲಕ್ಕೆ ಸಾಲ ಮರುಪಾವತಿ ಮಾಡದ ಕಾರಣ ಎಲ್ಲಿಯೂ ನೆರವು ದೊರೆಯುತ್ತಿಲ್ಲ. ಇದೀಗ ಪಾಕಿಸ್ತಾನಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮೊಬೈಲ್ ಹಾಗೂ ಇಂಟರ್ನೆಟ್ ಸಂಪರ್ಕ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.
ಅಗತ್ಯ ಪ್ರಮಾಣದಲ್ಲಿ ದ್ರವೀಕೃತ ನೈಸರ್ಗಿಕ ಅನಿಲದ ಪೂರೈಕೆ ಇಲ್ಲದ ಕಾರಣ ವಿದ್ಯುತ್ ಕೊರತೆ ಎದುರಿಸುತ್ತಿದ್ದು, ಹೀಗಾಗಿ ಟೆಲಿಕಾಂ ಆಪರೇಟರ್ ಗಳು ಇದೇ ಸಮಸ್ಯೆ ಮುಂದುವರೆದರೆ ಮೊಬೈಲ್ ಹಾಗೂ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ವಿದ್ಯುತ್ ಉಳಿತಾಯ ಮಾಡುವ ಸಲುವಾಗಿ ಪಾಕಿಸ್ತಾನದಲ್ಲಿ ಈಗಾಗಲೇ ಸರ್ಕಾರಿ ಕಚೇರಿಗಳ ಕೆಲಸದ ಅವಧಿಯನ್ನು ಕಡಿತಗೊಳಿಸಲಾಗಿದ್ದು, ಶಾಪಿಂಗ್ ಮಾಲ್, ಕಾರ್ಖಾನೆಗಳನ್ನು ಬೇಗನೆ ಮುಚ್ಚುವಂತೆ ಆದೇಶ ಮಾಡಲಾಗಿದೆ. ಇದರ ನಡುವೆ ಮೊಬೈಲ್ ಹಾಗೂ ಇಂಟರ್ನೆಟ್ ಸಂಪರ್ಕ ಸ್ಥಗಿತಗೊಂಡರೆ ಆರ್ಥಿಕ ಬಿಕ್ಕಟ್ಟು ಮತ್ತಷ್ಟು ಬಿಗಡಾಯಿಸಲಿದೆ.