alex Certify ಆತ್ಮಹತ್ಯಾ ಬಾಂಬ್ ಸ್ಪೋಟದಲ್ಲಿ ಮೃತರ ಸಂಖ್ಯೆ 46 ಕ್ಕೆ ಏರಿಕೆ: 150 ಮಂದಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆತ್ಮಹತ್ಯಾ ಬಾಂಬ್ ಸ್ಪೋಟದಲ್ಲಿ ಮೃತರ ಸಂಖ್ಯೆ 46 ಕ್ಕೆ ಏರಿಕೆ: 150 ಮಂದಿಗೆ ಗಾಯ

ಪಾಕಿಸ್ತಾನದ ವಾಯುವ್ಯ ನಗರವಾದ ಪೇಶಾವರದ ಮಸೀದಿಯಲ್ಲಿ ಸೋಮವಾರ ಮಧ್ಯಾಹ್ನದ ಪ್ರಾರ್ಥನೆಯ ವೇಳೆ ಪ್ರಬಲ ಆತ್ಮಹತ್ಯಾ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 46 ಕ್ಕೆ ಏರಿಕೆಯಾಗಿದೆ.

ಸ್ಪೋಟದಲ್ಲಿ ಕನಿಷ್ಠ 46 ಜನ ಸಾವನ್ನಪ್ಪಿದ್ದಾರೆ. 150 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪೇಶಾವರದ ಲೇಡಿ ರೀಡಿಂಗ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಮಧ್ಯಾಹ್ನ ಪ್ರಾರ್ಥನೆಯ ವೇಳೆ ಆತ್ಮಹತ್ಯಾ ದಾಳಿಕೋರನೊಬ್ಬ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಕಟ್ಟಡದ ಒಂದು ಭಾಗವು ಕುಸಿದು ಹಲವಾರು ಜನ ಅದರ ಅಡಿಯಲ್ಲಿ ಸಿಲುಕಿದ್ದರು. ಗಾಯಗೊಂಡವರಲ್ಲಿ ಹೆಚ್ಚಾಗಿ ಪೊಲೀಸರಿದ್ದರು ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ.

ಗಾಯಗೊಂಡವರಲ್ಲಿ 13 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಪೇಶಾವರದ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಸಂತ್ರಸ್ತರಿಗಾಗಿ ರಕ್ತದಾನ ಮಾಡುವಂತೆ ಆಸ್ಪತ್ರೆ ನಾಗರಿಕರಲ್ಲಿ ಮನವಿ ಮಾಡಿದೆ.

ಘಟನೆಯ ಬಗ್ಗೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ದುಃಖ ವ್ಯಕ್ತಪಡಿಸಿದ್ದು, ಪೇಶಾವರದ ಮಸೀದಿಯಲ್ಲಿ ಪ್ರಾರ್ಥನೆಯ ವೇಳೆ ನಡೆದ ಭಯೋತ್ಪಾದಕ ಆತ್ಮಹತ್ಯಾ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ನಮ್ಮ ಗುಪ್ತಚರ ವ್ಯವಸ್ಥೆ ಸುಧಾರಿಸುವುದು ಮತ್ತು ಹೆಚ್ಚುತ್ತಿರುವ ಭಯೋತ್ಪಾದನೆ ಎದುರಿಸಲು ನಮ್ಮ ಪೊಲೀಸ್ ಪಡೆಗಳನ್ನು ಸಜ್ಜುಗೊಳಿಸುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಲು ಪೇಶಾವರಕ್ಕೆ ತೆರಳಿದರು. ಪೇಶಾವರದ ಲೇಡಿ ರೀಡಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಗೃಹ ಸಚಿವ ರಾಣಾ ಸನಾವುಲ್ಲಾ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...