ಕೊರೊನಾ ವೈರಸ್ ವಿರುದ್ಧ ವಿಶ್ವದಾದ್ಯಂತ ಲಸಿಕೆ ಅಭಿಯಾನ ನಡೆಯುತ್ತದೆ. ಲಸಿಕೆಗೆ ಸಂಬಂಧಿಸಿದಂತೆ ಎಲ್ಲ ದೇಶಗಳು ತಮ್ಮದೆ ನಿಯಮ ರೂಪಿಸಿಕೊಂಡಿವೆ. ನೆರೆ ರಾಷ್ಟ್ರ ಪಾಕಿಸ್ತಾನ ಕೂಡ ಲಸಿಕೆ ಅಭಿಯಾನ ನಡೆಸುತ್ತಿದೆ. ಲಸಿಕೆ ಹಾಕದ ಜನರಿಗೆ ಪಾಕಿಸ್ತಾನ ಶಾಕಿಂಗ್ ಸುದ್ದಿ ನೀಡಿದೆ. ಲಸಿಕೆ ಹಾಕದ ಜನರಿಗೆ ಅಕ್ಟೋಬರ್ 15 ರಿಂದ ಸಾರ್ವಜನಿಕ ಸಾರಿಗೆಯನ್ನು ಬಳಸಲು ಅನುಮತಿಸಲಾಗುವುದಿಲ್ಲವೆಂದು ಪಾಕಿಸ್ತಾನ ಹೇಳಿದೆ.
ಪಾಕಿಸ್ತಾನದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳ ನಡುವೆ ಸೆಪ್ಟೆಂಬರ್ 30 ರ ನಂತರ ವಿಮಾನ ಪ್ರಯಾಣಕ್ಕೆ ಕೊರೊನಾ ಲಸಿಕೆಯನ್ನು ಕಡ್ಡಾಯಗೊಳಿಸಿದೆ. ಶಾಲೆಗಳಲ್ಲಿ ಕೆಲಸ ಮಾಡುವವರು ಮತ್ತು ಸಾರ್ವಜನಿಕ ಸಾರಿಗೆಯನ್ನು ಬಳಸುವವರು ಎರಡೂ ಡೋಸ್ ತೆಗೆದುಕೊಳ್ಳಬೇಕಾಗುತ್ತದೆ. ಆಗಸ್ಟ್ 31 ರಿಂದ ಲಸಿಕೆ ಹಾಕದ ಜನರು ಶಾಪಿಂಗ್ ಮಾಲ್‌ಗಳಿಗೆ ಹೋಗುವಂತಿಲ್ಲ.
ಲಸಿಕೆಯ ಮೊದಲ ಡೋಸ್ ತೆಗೆದುಕೊಂಡವರಿಗೆ ಸೆಪ್ಟೆಂಬರ್ 29 ರವರೆಗೆ ಶಾಪಿಂಗ್ ಮಾಲ್‌ಗಳಿಗೆ ಹೋಗಲು ಅವಕಾಶವಿದೆ. ಸೆಪ್ಟೆಂಬರ್ 30 ರಿಂದ, ಎರಡು ಡೋಸ್‌ಗಳನ್ನು ತೆಗೆದುಕೊಂಡ ಜನರಿಗೆ ಮಾತ್ರ ಶಾಪಿಂಗ್ ಮಾಲ್‌ಗೆ ಪ್ರವೇಶಿಸಲು ಅನುಮತಿ ನೀಡಲಾಗುವುದು ಎಂದು ಸರ್ಕಾರ ಹೇಳಿದೆ.
ಆಗಸ್ಟ್ 31 ರಿಂದ, ಕೊರೊನಾ ಲಸಿಕೆಯ ಮೊದಲ ಡೋಸ್ ತೆಗೆದುಕೊಳ್ಳುವವರಿಗೆ ಮಾತ್ರ ಹೋಟೆಲ್‌ಗಳಿಗೆ ಪ್ರವೇಶಿಸಲು ಅನುಮತಿ ನೀಡಲಾಗುವುದು.