ಕಾಂಗ್ರೆಸ್ ವಿಜಯೋತ್ಸವ ವೇಳೆ ಪಾಕ್ ಪರ ಘೋಷಣೆ: ಐವರ ವಿರುದ್ಧ ಕೇಸ್

ಬೆಳಗಾವಿ: ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಸಿಫ್ ಸೇಠ್ ಗೆಲುವು ಸಾಧಿಸುತ್ತಿದ್ದಂತೆ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದ್ದು, ಐವರ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಬೆಳಗಾವಿಯ ಆರ್‌ಪಿಡಿ ಕ್ರಾಸ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಸಿಫ್ ವಿಜಯೋತ್ಸವ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು, ಐದಕ್ಕೂ ಹೆಚ್ಚು ಜನರ ವಿರುದ್ಧ ಟಿಳಕವಾಡಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪಾಕಿಸ್ತಾನ ಪರ ಘೋಷಣೆ ಕೂಗಿದ ನಂತರ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಟಿಳಕವಾಡಿ ಪೊಲೀಸ್ ಠಾಣೆ ಎದುರು ಹನುಮಾನ್ ಚಾಲೀಸಾ ಪಠಿಸುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಸಂಭ್ರಮಾಚರಣೆ ವೇಳೆ ಕೆಲವು ಯುವಕರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು ಪೊಲೀಸರು ಗುಂಪಿನಲ್ಲಿದ್ದ ಕೆಲವರಿಗೆ ಎಚ್ಚರಿಕೆ ನೀಡಿದ್ದರು. ವಿಡಿಯೋ ವೈರಲ್ ಆಗಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು,

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read