ದಶಕದಿಂದ ಕ್ರಿಕೆಟ್ ಚಟುವಟಿಕೆ ಕಾಣದೇ ಬಣಗುಡುತ್ತಿರುವ ಪಾಕಿಸ್ತಾನಕ್ಕೆ ಇಂಗ್ಲೆಂಡ್‌ನ ಪುರುಷ ಹಾಗೂ ಮಹಿಳಾ ಕ್ರಿಕೆಟ್ ತಂಡಗಳು ಭೇಟಿ ನೀಡಲಿವೆ. ಅಕ್ಟೋಬರ್‌ನಲ್ಲಿ ಪಾಕಿಸ್ತಾನಕ್ಕೆ ಬರಲಿರುವ ಇಂಗ್ಲೆಂಡ್ ತಂಡ ಎರಡು ಟಿ20 ಪಂದ್ಯಗಳನ್ನು ಆಡಲಿದೆ.
2005ರ ಬಳಿಕ ಇದೇ ಮೊದಲ ಬಾರಿಗೆ ಪಾಕಿಸ್ತಾನಕ್ಕೆ ಆಗಮಿಸಲಿರುವ ಇಂಗ್ಲೆಂಡ್, ಆತಿಥೇಯ ತಂಡದ ವಿರುದ್ಧ ರಾವಲ್ಪಿಂಡಿಯಲ್ಲಿ ಟಿ20 ಪಂದ್ಯಗಳನ್ನು ಆಡಲಿದೆ.
ಚಾರ್ಮಾಡಿ ಘಾಟ್ ಮೂಲಕ ಸಂಚರಿಸುವವರೇ ಗಮನಿಸಿ, ಭಾರಿ ವಾಹನಗಳಿಗೆ ನಿರ್ಬಂಧ
ಸೆಪ್ಟೆಂಬರ್‌ನಲ್ಲಿ ಪಾಕಿಸ್ತಾನಕ್ಕೆ ಆಗಮಿಸಲಿರುವ ನ್ಯೂಜಿಲೆಂಡ್ ತಂಡವು, 18 ವರ್ಷಗಳ ಬಳಿಕ ಇಲ್ಲಿಗೆ ಆಗಮಿಸುತ್ತಿದೆ. ಮುಂದಿನ ಏಳು ತಿಂಗಳ ಅವಧಿಯಲ್ಲಿ ವೆಸ್ಟ್ ಇಂಡೀಸ್ ಹಾಗೂ ಆಸ್ಟ್ರೇಲಿಯಾ ತಂಡಗಳೂ ಸಹ ಪಾಕ್‌ಗೆ ಆಗಮಿಸುವ ಸಾಧ್ಯತೆ ಇದೆ.
2009ರಲ್ಲಿ ಶ್ರೀಲಂಕಾ ಕ್ರಿಕೆಟಿಗರ ಮೇಲೆ ಭಯೋತ್ಪಾದಕ ದಾಳಿ ನಡೆದಾಗಿನಿಂದ ಪಾಕಿಸ್ತಾನಕ್ಕೆ ಬಂದು ಕ್ರಿಕೆಟ್ ಆಡಲು ಬಹುತೇಕ ದೇಶಗಳು ಹಿಂದೇಟು ಹಾಕುತ್ತಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ಪರಿಸ್ಥಿತಿ ಸುಧಾರಣೆಯಾಗಿದ್ದು, ಜಿಂಬಾಬ್ವೆ, ಶ್ರೀಲಂಕಾ, ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಕಳೆದ ಆರು ತಿಂಗಳಿನಿಂದ ಪಾಕಿಸ್ತಾನಕ್ಕೆ ಆಗಮಿಸಿವೆ.