ನವದೆಹಲಿ: ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಹಲವು ಕಡೆ ಭೂಕಂಪದಿಂದ ಆರು ಜನ ಗಾಯಗೊಂಡಿದ್ದಾರೆ.
ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್, ಲಾಹೋರ್, ಪೇಶಾವರ, ರಾವಲ್ಪಿಂಡಿ ಸೇರಿದಂತೆ ಹಲವು ನಗರಗಳ ವ್ಯಾಪ್ತಿಯಲ್ಲಿ ಭೂಕಂಪ ಸಂಭವಿಸಿದೆ. ಪಾಕಿಸ್ತಾನ, ಆಫ್ಘಾನಿಸ್ತಾನ ಮೊದಲಾದ ದೇಶಗಳಲ್ಲಿ ಭೂಕಂಪ ಸಂಭವಿಸಿದೆ ಭೂಕಂಪ ಸಂಭವಿಸಿದ್ದು, ಆತಂಕದಿಂದ ಮನೆಗಳಿಂದ ಜನ ಹೊರಗೆ ಓಡಿ ಬಂದಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಎನ್.ಸಿ.ಆರ್. ವ್ಯಾಪ್ತಿಯಲ್ಲಿಯೂ ಪ್ರಬಲ ಭೂಕಂಪ ಸಂಭವಿಸಿದೆ. ಉತ್ತರ ಭಾರತದ ಹಲವು ಕಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಜಮ್ಮು ಮತ್ತು ಕಾಶ್ಮೀರ, ಉತ್ತರಪ್ರದೇಶ, ಪಂಜಾಬ್ ನಲ್ಲಿ ಮೂರು ಸೆಕೆಂಡ್ ಭೂಮಿ ತಪ್ಪಿಸಿದ ಅನುಭವ ಆಗಿದೆ.
ಆತಂಕದಿಂದ ಜನ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ರಿಕ್ಟರ್ ಮಾಪಕದಲ್ಲಿ 6.6 ರಷ್ಟು ತೀವ್ರತೆ ದಾಖಲಾಗಿದೆ. ಆಫ್ಘಾನಿಸ್ತಾನದಲ್ಲಿ ಭೂಕಂಪದ ಕೇಂದ್ರ ಬಿಂದು ಕಂಡು ಬಂಡಿದೆ. ಪೈಜಾಬಾದ್ ನಿಂದ 133 ಕಿಲೋಮೀಟರ್ ದೂರದಲ್ಲಿ ಭೂಕಂಪದ ಕೇಂದ್ರ ಬಿಂದು ಕಂಡು ಬಂದಿದೆ.