ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಬಾಂಬ್ ಸ್ಪೋಟ ಸಂಭವಿಸಿ 40 ಜನ ಸಾವನ್ನಪ್ಪಿದ್ದಾರೆ. ಖೈಬರ್ ಪಂಕ್ತುನ್ವಾ ಪ್ರಾಂತ್ಯದ ಬಜೌರ್ ನಗರದಲ್ಲಿ ಘಟನೆ ನಡೆದಿದೆ.
ಸ್ಪೋಡದಲ್ಲಿ 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಜೌರ್ ನಗರದಲ್ಲಿ ನಡೆದ ರಾಜಕೀಯ ಸಮಾವೇಶದಲ್ಲಿ ಸ್ಪೋಟ ಸಂಭವಿಸಿದೆ.
ಸ್ಪೋಟದ ತೀವ್ರತೆಗೆ 40ಕ್ಕೂ ಅಧಿಕ ಮಂದಿ ಸಾವು ಕಂಡಿದ್ದು, ರಕ್ಷಣಾ ಕಾರ್ಯಚರಣೆ ಆರಂಭಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಾಯುವ್ಯ ಪಾಕಿಸ್ತಾನದಲ್ಲಿ ಉಗ್ರಗಾಮಿ ಧರ್ಮಗುರುಗಳ ರಾಜಕೀಯ ರ್ಯಾಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 39 ಜನರು ಸಾವನ್ನಪ್ಪಿದ್ದಾರೆ. 80 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಬಜೌರ್‌ನ ಖಾರ್‌ನಲ್ಲಿ ಜಮಿಯತ್ ಉಲೇಮಾ-ಎ-ಇಸ್ಲಾಂ-ಫಜಲ್(ಜೆಯುಐ-ಎಫ್) ಕಾರ್ಯಕರ್ತರ ಸಮಾವೇಶದಲ್ಲಿ ಸ್ಫೋಟ ಸಂಭವಿಸಿದೆ.
JUI-F ಮುಖ್ಯಸ್ಥ ಮೌಲಾನಾ ಫಜ್ಲುರ್ ರೆಹಮಾನ್ ಅವರು ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಪ್ರಾಂತ್ಯದ ಉಸ್ತುವಾರಿ ಮುಖ್ಯಮಂತ್ರಿ ಅಜಮ್ ಖಾನ್ ಅವರನ್ನು ಒತ್ತಾಯಿಸಿದರು. ಪಕ್ಷದ ಕಾರ್ಯಕರ್ತರು ಆಸ್ಪತ್ರೆಗೆ ಆಗಮಿಸಿ ರಕ್ತದಾನ ಮಾಡುವಂತೆ ಮನವಿ ಮಾಡಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.